ಹೊಳಲ್ಕೆರೆ: ಪಟ್ಟಣದ ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಗಿಲಿಕೇನಹಳ್ಳಿಯ ಅಜ್ಜಯ್ಯ ಅವರ ಮನೆಗೆ ಶನಿವಾರ ಸಚಿವ ಡಿ. ಸುಧಾಕರ್ ಹಾಗೂ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಪತ್ನಿ ಪುಷ್ಪಾವತಿ ಅವರಿಗೆ ಧನಸಹಾಯ ಮಾಡಿ ಸಾಂತ್ವನ ಹೇಳಿದರು.

‘ಮೃತ ಅಜ್ಜಯ್ಯ ಪತ್ನಿಗೆ ಹನುಮಂತ ದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸಲಾಗುವುದು. ಅಜ್ಜಯ್ಯ ರೈತನಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು. ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕೊಳವೆ ಬಾವಿ ಕೊರೆಸಿ ಕೊಡಲಾಗುವುದು. ದೂರು ದಾಖಲಿಸಲು ವಿಳಂಬ ಮಾಡಿದ ಹಾಗೂ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಸುಧಾಕರ್ ತಿಳಿಸಿದರು.

‘ನಡೆಯಬಾರದ ಘಟನೆ ನಡೆದಿದ್ದು, ಜನ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಸಾರ್ವಜನಿಕರ ಹಕ್ಕು. ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸುವಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಹಲವರು ಗಾಯಗೊಂಡಿದ್ದಾರೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

‘ನಾನು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಜನರ ಮನವೊಲಿಸಿದೆ. ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸುವುದಾಗಿ ತಿಳಿಸಿದ ಮೇಲೆ ಗ್ರಾಮಸ್ಥರು ಶವವನ್ನು ಗಿಲಿಕೇನಹಳ್ಳಿಗೆ ಕೊಂಡೊಯ್ದು ಅಂತ್ಯಕ್ರಿಯೆ ಮಾಡಿದರು. ಇಲ್ಲವಾದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು. ನಾನೇ ಆಸ್ಪತ್ರೆಗೆ ಭೇಟಿ ನೀಡಿ ಲಾಠಿ ಚಾರ್ಜ್ನಲ್ಲಿ ಗಾಯಗೊಂಡವರನ್ನು ಚಿತ್ರದುರ್ಗದ ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದೆ. ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸಿದ್ದರೆ ಈ ಅಚಾತುರ್ಯ ನಡೆಯುತ್ತಿರಲಿಲ್ಲ’ ಎಂದು ಮಾಜಿ ಸಚಿವ ಎಚ್. ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ಗ್ರಾಮದ 15 ಜನರ ಮೇಲೆ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದಾಗ ಯಾರ ವಿರುದ್ಧವೂ ಪ್ರಕರಣ ದಾಖಲಿಸಲು ಬಿಡುವುದಿಲ್ಲ ಎಂದು ಸಚಿವ ಡಿ.ಸುಧಾಕರ್ ಹಾಗೂ ಆಂಜನೇಯ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ. ಹನುಮಂತಪ್ಪ, ಪಿ.ಆರ್. ಶಿವಕುಮಾರ್, ಪಾಡಿಗಟ್ಟೆ ಸುರೇಶ್, ಸಂಗನ ಗುಂಡಿ ಮಂಜುನಾಥ್, ಪಿ. ಹನುಮಂತಪ್ಪ, ಕರಿಯಪ್ಪ, ಎಂ.ಟಿ. ರಾಜಪ್ಪ, ಎಂ.ಜೆ. ಹನುಮಂತಪ್ಪ, ಸಿ. ರಾಮಪ್ಪ, ರೆಡ್ಡಿ ರಂಗಪ್ಪ, ಡಿ.ಸಿ. ನವೀನ್, ಎಂ.ಟಿ. ರಂಗಸ್ವಾಮಿ, ಕುಬೇಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.