ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದ ಶಂಕರರ ಪ್ರತಿಮೆ ಅನಾವರಣಕ್ಕೆ ಮಾದಾರ ಚನ್ನಯ್ಯ ಸ್ವಾಮೀಜಿಗೆ ಆಹ್ವಾನ

Published 13 ಸೆಪ್ಟೆಂಬರ್ 2023, 13:34 IST
Last Updated 13 ಸೆಪ್ಟೆಂಬರ್ 2023, 13:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಧ್ಯಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯ ಉದ್ಘಾಟನಾ ಸಮಾರಂಭಕ್ಕೆ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಆಹ್ವಾನ ಬಂದಿದೆ.

ಸೆ.18ರಂದು ಓಂಕಾರೇಶ್ವರದಲ್ಲಿ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಪತ್ರದಲ್ಲಿ ಕೋರಿದ್ದಾರೆ.

‘ಶಂಕರಾಚಾರ್ಯರು ಅದ್ವೈತ ಮತವನ್ನು ಸ್ಥಾಪಿಸಿ ಮನಕುಲದ ಸಮಾನತೆಯನ್ನು ಸಾರಿದ್ದಾರೆ. ಅವರ ತತ್ವ, ಸಿದ್ಧಾಂತವನ್ನು ಮುಂದಿನ ಪೀಳಿಗೆಗೆ ಪ್ರಚಾರಪಡಿಸುವ ಉದ್ದೇಶದಿಂದ ಮಧ್ಯಪ್ರದೇಶ ಸರ್ಕಾರ ಯೋಜನೆ ರೂಪಿಸಿದೆ. ಶಂಕರಾಚಾರ್ಯರ ‘ಏಕತೆಯ ಪ್ರತಿಮೆ’ಯ ಉದ್ಘಾಟನೆ ಹಾಗೂ ಅದ್ವೈತ ಕೇಂದ್ರದ ಭೂಮಿ ಪೂಜೆ ಸಮಾರಂಭದಲ್ಲಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ’ ಎಂದು ಮಾದಾರ ಚನ್ನಯ್ಯ ಗುರುಪೀಠದ ವ್ಯವಸ್ಥಾಪಕ ಬಿ.ಹರೀಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT