ಬುಧವಾರ, ಅಕ್ಟೋಬರ್ 28, 2020
24 °C

ಮೊಳಕಾಲ್ಮುರು: ಅಂಗನವಾಡಿ ಫೆಡರೇಷನ್‌ನಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು:  ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಅಂಗನವಾಡಿಗಳನ್ನು ಇನ್ನಷ್ಟು ಬಲಪಡಿಸಬೇಕು ಎಂದು ಆಗ್ರಹಿಸಿ ಸೋಮವಾರ ತಾಲ್ಲೂಕು ಅಂಗನವಾಡಿ ಫೆಡರೇಷನ್‌ನಿಂದ  ಪ್ರತಿಭಟನೆ ನಡೆಸಲಾಯಿತು.

ಐಸಿಡಿಸಿ ಯೋಜನೆ ಅಡಿಯಲ್ಲಿ ಈ ಕಾರ್ಯವನ್ನು ಕೈಗೊಳ್ಳುವ ಮೂಲಕ ನೆರವಿಗೆ ಬರಬೇಕು. ಈ ಕುರಿತು ಕಾರ್ಯಕರ್ತೆಯರಿಗೆ  ತರಬೇತಿ ನೀಡಬೇಕು. ಪಠ್ಯಪುಸ್ತಕಗಳನ್ನು ಸರಬರಾಜು ಮಾಡಬೇಕು. ಮಕ್ಕಳಿಗೆ ಸಮವಸ್ತ್ರ ನೀಡಬೇಕು. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದಾಖಲಾತಿ ಪಡೆಯುವಾಗ ಅಂಗನವಾಡಿ ಕೇಂದ್ರದ ವರ್ಗಾವಣೆ ಪತ್ರವನ್ನು ಕಡ್ಡಾಯ ಮಾಡಬೇಕು ಎಂದು
ಆಗ್ರಹಿಸಿದರು.

ಈ ಕುರಿತು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ತಹಶೀಲ್ದಾರ್ ಮಲ್ಲಿಕಾರ್ಜುನ್ ಮನವಿ ಸ್ವೀಕರಿಸಿದರು. 

ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್, ಅರವಿಂದಾ ಬಾಯಿ, ಗಂಗಮ್ಮ, ನಾಗರತ್ನಮ್ಮ, ಭಾಗ್ಯಮ್ಮ, ಮಹಾದೇವಿ, ರಾಜೇಶ್ವರಿ, ಸುಶೀಲಮ್ಮ, ಪಾಲಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು