ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋನಸಾಗರ: ಸಾಕ್ಷರತಾ ದಿನಾಚರಣೆ

Last Updated 9 ಸೆಪ್ಟೆಂಬರ್ 2021, 13:42 IST
ಅಕ್ಷರ ಗಾತ್ರ

ಮೊಳಕಾಲ್ಮುರು:ಶಿಕ್ಷಣ ದೇಶದ ಅಭಿವೃದ್ಧಿ ಸಂಕೇತವಾಗಿದ್ದು, ಎಲ್ಲರೂ ಶಿಕ್ಷಣದ ಮುಖ್ಯವಾಹಿನಿಗೆ ಬಂದು ದೇಶವನ್ನು ಉತ್ತಮ ದಾರಿಯಲ್ಲಿ ಮುನ್ನೆಡೆಸಬೇಕು ಎಂದು ಜಿಲ್ಲಾವಯಸ್ಕರ ಶಿಕ್ಷಣಾಧಿಕಾರಿ ಮಂಜುಳಾ ಹೇಳಿದರು.

ತಾಲ್ಲೂಕಿನ ಕೋನಸಾಗರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸಾಕ್ಷರ ಭಾರತ್ ಮಿಷನ್ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಡ್ಡಾಯ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಸರ್ಕಾರವು ಹತ್ತಾರು ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳನ್ನು ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಾಲಯ್ಯ ಅಧ್ಯಕ್ಷತೆ ವಹಿಸಿದ್ದರು.ಶಿಕ್ಷಣ ಇಲಾಖೆಯ ಶಿವಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು.

ತಾಲ್ಲೂಕು ಪಂಚಾಯಿತಿ ಉಪ ವ್ಯವಸ್ಥಾಪಕ ಸಂಪತ್ ಕುಮಾರ್, ಸಾಕ್ಷರ ಭಾರತ್ ತಾಲ್ಲೂಕು ನೋಡಲ್ ಅಧಿಕಾರಿ ಕೆ. ಶಾಂತವೀರಣ್ಣ, ಸಿಆರ್‌ಪಿ ಹಮೀದ್ಸಾಬಿ, ಪಿಡಿಒ ಬಾಂಡ್ರಾವಪ್ಪ, ಮುಖ್ಯಶಿಕ್ಷಕ ಕರಿಬಸಪ್ಪ, ಶಿಕ್ಷಕಿ ಜಯಲಕ್ಷ್ಮೀ, ಜನಸಂಸ್ಥಾನ ಸಂಸ್ಥೆಯ ವಿರೂಪಾಕ್ಷಪ್ಪ, ವೆಡ್ಸ್ ಸಂಸ್ಥೆಯ ಗಂಗಾಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT