ಅಣ್ಣ ತಮ್ಮಂದಿರ ಬಜೆಟ್: ರಾಜಣ್ಣ ಟೀಕೆ

7

ಅಣ್ಣ ತಮ್ಮಂದಿರ ಬಜೆಟ್: ರಾಜಣ್ಣ ಟೀಕೆ

Published:
Updated:
ಕೆ.ಎನ್.ರಾಜಣ್ಣ

ಮಧುಗಿರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹಾಕಿದ್ದಾರೆ. ಈ ಬಜೆಟ್ ಅಣ್ಣ ತಮ್ಮಂದಿರ ಬಜೆಟ್ ಆಗಿದೆ ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನ್ನಭಾಗ್ಯ ಯೋಜನೆಯಲ್ಲಿ ಬಡವರ್ಗದವರಿಗೆ ನೀಡುವ ಅಕ್ಕಿಯನ್ನು ಕಡಿತಗೊಳಿಸಿರುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಯೋಜನೆಯನ್ನು ಮುಂದುವರಿಸಬೇಕು ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್‌ ಅನ್ನು ವಾಪಸ್‌ ಪಡೆಯಬೇಕೆಂದು ಕಾಂಗ್ರೆಸ್ ಶಾಸಕರಿಗೆ ಹಾಗೂ ಮುಖಂಡರ ಮೇಲೆ ಒತ್ತಡ ಹೇರಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಜೆ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಪುರಸಭೆ ಸದಸ್ಯರಾದ ಎಂ.ಕೆ.ನಂಜುಂಡಯ್ಯ, ಅಯೂಬ್, ಶ್ರೀನಿವಾಸ್, ಮುಖಂಡರಾದ ಎಸ್.ಡಿ.ಕೃಷ್ಣಪ್ಪ, ಪಿ.ಸಿ.ಕೃಷ್ಣಾರೆಡ್ಡಿ, ಎಂ.ಎಸ್.ಶಂಕರನಾರಾಯಣ್, ಆರ್.ಎ. ನಾರಾಯಣ್, ಎಸ್.ಬಿ.ಟಿ.ರಾಮು, ಕೃಷ್ಣ ಇದ್ದರು.

ಕ್ಷೇತ್ರದಲ್ಲಿ ಮಟ್ಕಾ, ಜೂಜಾಟ ಹಾಗೂ ಮರಳು ದಂಧೆ ಹೆಚ್ಚಾಗುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕಳ್ಳತನ ಹಾಗೂ ಹೊಡೆದಾಟ ಪ್ರಕರಣಗಳು ಹೆಚ್ಚಾಗುತ್ತವೆ
 - ಕೆ.ಎನ್.ರಾಜಣ್ಣ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !