ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ ನಗರಸಭೆಗೆ ಅನುರಾಧಾ ನೂತನ ಉಪಾಧ್ಯಕ್ಷೆ

ವಾರ್ಡ್‌ಗಳಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ
Last Updated 9 ನವೆಂಬರ್ 2021, 6:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿಯ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ‘ಚುನಾವಣೆ’ ಪ್ರಕ್ರಿಯೆಯಲ್ಲಿ ಎನ್‌.ಒ. ಅನುರಾಧಾ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಉಪವಿಭಾಗಾಧಿಕಾರಿ ಚಂದ್ರಯ್ಯ ಅವರು ಆಯ್ಕೆಯನ್ನು ಘೋಷಿಸಿದರು.

ಸದಸ್ಯೆ ಶ್ವೇತಾ ವೀರೇಶ್‌ ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಿಗದಿಯಂತೆ ಚುನಾವಣೆ ನಡೆಯಿತು. ಸದಸ್ಯೆ ಅನುರಾಧಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ಅವರ ಅವಧಿ ಮುಂದಿನ ಒಂದು ವರ್ಷದವರೆಗೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿಯ ನಗರಸಭೆಗೆ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಸಂಬಂಧ ಚುನಾಯಿತ 35 ಮಂದಿ ಸದಸ್ಯರು, ಶಾಸಕರು ಹಾಗೂ ಸಂಸದರು ಸೇರಿ ಒಟ್ಟು 37 ಜನ ಮತದಾನದ ಹಕ್ಕನ್ನು ಹೊಂದಿದ್ದಾರೆ. ಇದರಲ್ಲಿ 18 ಜನ ಮಾತ್ರ ಹಾಜರಾಗಿದ್ದರು. ಉಳಿದ 19 ಜನ ಗೈರಾಗಿದ್ದರು.

ನೂತನ ಉಪಾಧ್ಯಕ್ಷೆ ಅನುರಾಧಾ, ‘ನಗರದ ಸ್ವಚ್ಛತೆ, ಸಮರ್ಪಕ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ನಿರ್ವಹಣೆಯ ಕುರಿತು ಹೆಚ್ಚು ಆದ್ಯತೆ ನೀಡಲಾಗುವುದು. ನಿತ್ಯ ವಾರ್ಡ್‌ಗಳಲ್ಲಿ ಸಂಚರಿಸಿ ಸಾರ್ವಜನಿಕರು, ಮತದಾರರ ಸಮಸ್ಯೆ ಆಲಿಸುತ್ತೇನೆ. ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಪೌರಾಯುಕ್ತ ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ, ಸಿಬ್ಬಂದಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT