ಭಾನುವಾರ, ಅಕ್ಟೋಬರ್ 25, 2020
27 °C

ಎಪಿಎಂಸಿ ಕಾಯ್ದೆ ರೈತರ ಪಾಲಿನ ಮರಣ ಶಾಸನ: ಈಚಘಟ್ಟದ ಸಿದ್ದವೀರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳಲ್ಕೆರೆ: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳು ರೈತರ ಪಾಲಿಗೆ ಮರಣ ಶಾಸನವಾಗಿವೆ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ದೂರಿದರು.

ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಭೂ ಸುಧಾರಣೆ ಕಾಯ್ದೆ ಮೂಲಕ ಮೊದಲು ರೈತರಿಂದ ಭೂಮಿಯನ್ನು ಕಸಿದುಕೊಂಡು, ನಂತರ ಎಪಿಎಂಸಿ ಕಾಯ್ದೆ ಮೂಲಕ ಅವರು ಬೆಳೆದ ಬೆಳೆಯನ್ನೂ ಕಬಳಿಸುವ ಹುನ್ನಾರ ನಡೆಸಿದ್ದಾರೆ. ಎಪಿಎಂಸಿ ಕಾಯ್ದೆಯಿಂದ ವ್ಯಾಪಾರಿಗಳು ರೈತರ ಮೇಲೆ ಹಿಡಿತ ಸಾಧಿಸುತ್ತಾರೆ. ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಿ ಸಂಗ್ರಹಿಸುವ ಮೂಲಕ ಕೃತಕ ಅಭಾವ ಸೃಷ್ಟಿಸುತ್ತಾರೆ. ಆಗ ಆಹಾರ ಭದ್ರತೆ ಇಲ್ಲದಂತಾಗಿ ರೈತರಲ್ಲದೆ ಮಧ್ಯಮ ವರ್ಗದ ಜನರಿಗೂ ತೊಂದರೆ ಆಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿ ಮುಖ್ಯವೃತ್ತದಲ್ಲಿ ಪ್ರತಿಕೃತಿ ದಹನ ಮಾಡಿದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೊಟ್ರೆ ಶಂಕರಪ್ಪ, ಅಪ್ಪರಸನ ಹಳ್ಳಿ ಬಸವರಾಜಪ್ಪ, ಉಪಾಧ್ಯಕ್ಷ ಜಿ.ಎಲ್.ಜೀವನ್, ಕಾರ್ಯದರ್ಶಿ ಉಮೇಶ್, ಹಸಿರು ಸೇನೆಯ ಜಯಣ್ಣ, ಲೋಕೇಶ್, ಅಜಯ್, ನಾಗರಾಜಪ್ಪ, ಶಿವಲಿಂಗ ಸ್ವಾಮಿ, ನಾಡಿಗ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು