ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣ ನೀರು ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರು ವಿಶ್ವೇಶ್ವರಯ್ಯ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನಲ್ಲಿ ಸುಮಾರು ಒಂದೂವರೆ ತಿಂಗಳಿಂದ ಮಳೆಯಾಗಿಲ್ಲದ ಕಾರಣ ಅಂತರ್ಜಲ ಕುಸಿದಿದೆ. ತೆಂಗು, ಅಡಿಕೆ, ಬಾಳೆ, ದಾಳಿಂಬೆ, ಪಪ್ಪಾಯಿ ಮೊದಲಾದ ತೋಟಗಾರಿಕೆ ಬೆಳೆಗಳು, ಕೆಲವು ಅಲ್ಪಾವಧಿ ಬೆಳೆಗಳು ನೀರಿಲ್ಲದೆ ಒಣಗ ತೊಡಗಿವೆ. ಬೆಳೆಗಳನ್ನು ಉಳಿಸಿಕೊಳ್ಳುವುದು ರೈತರಿಗೆ ಅನಿವಾರ್ಯವಾಗಿದ್ದು, ಆದ್ದರಿಂದ ಜಲಾಶಯದಿಂದ ನೀರು ಹರಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

ಈ ಬಗ್ಗೆ ವಿಶ್ವೇಶ್ವರಯ್ಯ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸಲ್ಲಿಸಿದ ಮನವಿಯನ್ನು ಸಿಬ್ಬಂದಿ ಸ್ವೀಕರಿಸಿದರು.

ಪ್ರಸ್ತುತ ಜಲಾಶಯದಲ್ಲಿ 126.15 ಅಡಿ ನೀರಿನ ಸಂಗ್ರಹವಿದ್ದು, ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಿದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಂಘದ ಅಧ್ಯಕ್ಷ ಬ್ಯಾಡರಹಳ್ಳಿ ಶಿವಕುಮಾರ್ ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಸಿ. ಹೊರಕೇರಪ್ಪ, ಚೇತನ್ ಯಳನಾಡು, ದಸ್ತಗೀರ್ ಸಾಬ್, ಎಂ. ಲಕ್ಷ್ಮೀಕಾಂತ್, ಮೊಹಿದ್ದೀನ್, ರವೀಶ್, ನಾಗರಾಜ್, ವಿ. ಕಲ್ಪನ, ಮಂಜುಳ, ಮರದಮುತ್ತು, ಎನ್.ರಮೇಶ್, ಎಚ್.ತಿಪ್ಪೇರುದ್ರಪ್ಪ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.