ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರ್ ಖಂಡ್ರೆ ವಿರುದ್ಧ ಅರಗ ಜ್ಞಾನೇಂದ್ರ ಟೀಕೆ: ನಂದಿಹಳ್ಳಿ ಪಾತಯ್ಯ ಖಂಡನೆ

Published 3 ಆಗಸ್ಟ್ 2023, 14:36 IST
Last Updated 3 ಆಗಸ್ಟ್ 2023, 14:36 IST
ಅಕ್ಷರ ಗಾತ್ರ

ಹಿರಿಯೂರು: ಸಚಿವ ಈಶ್ವರ್ ಖಂಡ್ರೆ ವಿರುದ್ಧ ಶಾಸಕ ಅರಗ ಜ್ಞಾನೇಂದ್ರ ಮಾಡಿರುವ ಟೀಕೆ ಬಿಜೆಪಿಯ ನೈತಿಕ ಅಧಃಪಥನದ ಸಂಕೇತವಾಗಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ನಂದಿಹಳ್ಳಿ ಪಾತಯ್ಯ ಅವರು ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ರಾಜಕಾರಣದಲ್ಲಿ ಹಿರಿಯರಾದ, ಸಾರ್ವಜನಿಕ ಸೇವೆಯನ್ನು ಬದುಕಾಗಿಸಿಕೊಂಡಿರುವ, ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ಕಾರಣೀಭೂತರಾದ ಮುಖಂಡರೊಬ್ಬರ ಬಗ್ಗೆ ಮಾತನಾಡುವಾಗ ನಾಲಗೆಯ ಮೇಲೆ ಹಿಡಿತವಿರಬೇಕು. ಖಂಡ್ರೆ ಅವರು ಎರಡು ಬಾರಿ ಸಂಪುಟ ದರ್ಜೆ ಸಚಿವರಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಪಾರ ಅನುಭವ ಹೊಂದಿದ್ದಾರೆ. ಅಂತಹವರ ಬಗ್ಗೆ ಮಾತನಾಡುವ ಮೊದಲು ಎಚ್ಚರ ಇರಬೇಕು ಎಂದು ಅವರು ತಿಳಿಸಿದ್ದಾರೆ.

ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಸ್ವಾತಂತ್ರ್ಯ ಹೋರಾಟಗಾರರು. ಅವರ ಬಗ್ಗೆ ಲಘುವಾಗಿ ಮಾತನಾಡಿರುವುದು ಆರಗ ಜ್ಞಾನೇಂದ್ರ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ. ಆರಗ ಜ್ಞಾನೇಂದ್ರ ತಮ್ಮ ಹೇಳಿಕೆಗೆ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಪಾತಯ್ಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT