ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಪುನೀತ್ ರಾಜ್‍ಕುಮಾರ್‌ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ

Last Updated 3 ಮೇ 2022, 7:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುರುಘಾ ಮಠದ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಪ್ರಶಸ್ತಿ ಸ್ವೀಕರಿಸಿದರು.

ಇಲ್ಲಿನ ಮುರುಘಾ ಮಠದ ಅನುಭವ ಮಂಟಪದಲ್ಲಿ ಬಸವ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು 2021ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪಾರಿತೋಷಕ ಒಳಗೊಂಡಿದೆ.

'ನಟ ಪುನೀತ್ ರಾಜ್‍ಕುಮಾರ್ ಕನ್ನಡದ ಕುವರ. ನಟನೆ ಮತ್ತು ವ್ಯಕ್ತಿತ್ವದ ಮೂಲಕ ಆಕಾಶದ ಎತ್ತರಕ್ಕೆ ಬೆಳೆದರು. ಅಭಿನಯ, ಹಾಡುಗಾರಿಕೆ, ಅಭಿವ್ಯಕ್ತಿಯಲ್ಲಿ ಪುನೀತ್ ಅವರನ್ನು ಮೀರಿಸಲು ಯಾರಿಗೂ ಸಾಧ್ಯವಿಲ್ಲ. ರಾಜ್ ಕುಟುಂಬ ಇಡೀ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದೆ. ಈ ಮೂಲಕ ಕುಟುಂಬ ಇಡೀ ರಾಜ್ಯಕ್ಕೆ ಮಾದರಿಯಾಗಿದೆ' ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಪುನೀತ್ ಕುರಿತು ಸಾಹಿತಿ ರಾಜಪ್ಪ ದಳವಾಯಿ ಮಾತನಾಡಿದರು. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕೃಷಿ ಸಚಿವ ಬಿ.ಸಿ‌.ಪಾಟೀಲ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಚಿತ್ರ ನಿರ್ಮಾಪಕ ಚಿನ್ನೇಗೌಡ, ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ ಇದ್ದರು.

ಪುನೀತ್ ರಾಜ್‍ಕುಮಾರ್ ಅವರ ಸಿನಿಮಾ ಹಾಡುಗಳಿಗೆ ಮಕ್ಕಳು ನೃತ್ಯ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT