ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯತಮೆ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಪರಾರಿ

Published 30 ಜನವರಿ 2024, 14:19 IST
Last Updated 30 ಜನವರಿ 2024, 14:19 IST
ಅಕ್ಷರ ಗಾತ್ರ

ಭರಮಸಾಗರ: ಪ್ರಿಯತಮೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪ್ರಿಯಕರ ಪರಾರಿಯಾಗಿರುವ ಘಟನೆ ಸಮೀಪದ ಸುಲ್ತಾನಿಪುರ ಗ್ರಾಮದಲ್ಲಿ  ಸೋಮವಾರ ರಾತ್ರಿ ನಡೆದಿದೆ.

ಸಮೀನಾ ಹಲ್ಲೆಗೊಳಗಾದ ಯುವತಿ. ಮಚ್ಚಿನಿಂದ ಕುತ್ತಿಗೆ ಭಾಗಕ್ಕೆ ಹಲ್ಲೆ ಮಾಡಿ ಹತ್ಯೆಗೆ ಪ್ರಯತ್ನಿಸಿದ್ದ ಪ್ರಿಯಕರ ದಾದಾಪೀರ್‌ ಪರಾರಿಯಾಗಿದ್ದಾನೆ.

‘ಸಮೀಪದ ಸುಲ್ತಾನಿಪುರದಲ್ಲಿ ಶೆಡ್‌ವೊಂದನ್ನು ನಿರ್ಮಾಣ ಮಾಡಿಕೊಂಡು ಅದರಲ್ಲಿ ವಾಸ ಮಾಡುತ್ತಿದ್ದ ಈ ಜೋಡಿಯ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಮೀನಾಳನ್ನು ನೆರೆಯವರು ದಾವಣಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭರಮಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT