ಸೋಮವಾರ, ಜೂನ್ 27, 2022
22 °C

ಗಾಂಜಾ ಮಾರುತ್ತಿದ್ದ ಮನೆ ಮೇಲೆ ದಾಳಿ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ನಗರದ ದುರ್ಗಮ್ಮ ದೇವಸ್ಥಾನದ ಬಳಿಯ ಮನೆಯೊಂದರ ಮೇಲೆ  ಭಾನುವಾರ ರಾತ್ರಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು ₹ 15 ಸಾವಿರ ಮೌಲ್ಯದ 1 ಕೆ.ಜಿ. 5 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಗುಂಡೂರಾವ್ ಎಂಬುವರ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅವರನ್ನು ಬಂಧಿಸಿದ್ದು, ಎರಡು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಗಾಂಜಾ ಖರೀದಿಗೆ ಬಂದಿದ್ದ ಇಬ್ಬರು ಪರಾರಿಯಾಗಿದ್ದಾರೆ ಎಂದು ಅಬಕಾರಿ ಇನ್‌ಸ್ಪೆಕ್ಟರ್ ರಾಘವೇಂದ್ರ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಎಸ್ಐ ಟಿ. ಕರಿಬಸಪ್ಪ, ಕಾನ್‌ಸ್ಟೆಬಲ್‌ಗಳಾದ ಲೋಹಿತ್, ಸತೀಶ್, ಪಾಟೀಲ್, ವೀರಣ್ಣ ಭಾಗವಹಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು