ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳು ಒಂದಾಗಿ ಶಕ್ತಿ ಪ್ರದರ್ಶಿಸಿ

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ
Last Updated 2 ಅಕ್ಟೋಬರ್ 2022, 5:04 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯದಲ್ಲಿರುವ ಹಿಂದುಳಿದ ವರ್ಗಗಗಳಿಗೆ ನ್ಯಾಯ ಒದಗಿಸುವ ಮಂತ್ರವನ್ನು ಬಿಜೆಪಿ ಜಪಿಸುತ್ತಿದೆ. ಅಕ್ಟೋಬರ್ 30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜತಿಳಿಸಿದರು.

ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕ ಹಾಗೂ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಶನಿವಾರ ನಡೆದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಹಿಂದುಳಿದ ವರ್ಗಗಳ ಎಲ್ಲ ಜಾತಿಗಳು ಒಟ್ಟಾಗಿ ತಮ್ಮ ಶಕ್ತಿ ಪ್ರದರ್ಶಿಸ
ಬೇಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಬೇಕಾಗಿದೆ. ಆದ್ದರಿಂದ ಹಿಂದುಳಿದ ವರ್ಗದವರು ಸಂಘಟಿತರಾಗಬೇಕು. ಸಮಾವೇಶಕ್ಕೆ ಜಿಲ್ಲೆಯಿಂದ ಹದಿನೈದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

ಸಮಾವೇಶದ ಯಶಸ್ಸಿಗಾಗಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದರು.

‘ಚಿತ್ರದುರ್ಗದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಇದುವರೆಗೂ ನಿಗಮ ಮಂಡಳಿಗಳಿಗೆ ನೇಮಕ ಮಾಡಿಲ್ಲ ಎನ್ನುವ ಕೊರಗಿದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಳಿ ಮಾತನಾಡಿ ಚಿತ್ರದುರ್ಗಕ್ಕೆ ಆದ್ಯತೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

‘ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರು ಹೆಚ್ಚಾಗಿದ್ದಾರೆ. ಇಲ್ಲಿಯೇ ಸಮಾವೇಶ ನಡೆಯಬೇಕಿತ್ತು. ಆದರೆ ಪಕ್ಷದ ನಾಯಕರು ಕಲಬುರಗಿಯಲ್ಲಿ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಲು ವ್ಯವಸ್ಥೆ ಮಾಡಲಾಗುವುದು’ ಎಂದುಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಕೇಂದ್ರದಲ್ಲಿ 21 ಸಚಿವರು ಹಿಂದುಳಿದವರಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದವರಿಗೆ ಹೆಚ್ಚಿನ ಪ್ರಾಧಾನ್ಯತೆ ಸಿಕ್ಕಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಹೇಳಿದರು.

ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್‌ ಬಾಬಣ್ಣ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್‌ ಕುಮಾರ್‌, ನಗರ ಘಟಕದ ಅಧ್ಯಕ್ಷ ಎನ್‌.ಕೃಷ್ಣ ಇದ್ದರು.

ಆರ್‌ಎಸ್‌ಎಸ್‌ ದೇಶದ ಸ್ವಾಭಿಮಾನ, ಸಂಸ್ಕೃತಿ ಕಾಪಾಡುವ ಸಂಸ್ಥೆ. ಇದರ ಬಗ್ಗೆ ಯೋಚನೆ ಮಾಡಿ ಮಾತಾಡಬೇಕು. ‘ಪೇ ಸಿಎಂ’ ಎಂಬ ಭ್ರಷ್ಟಾಚಾರದ ಆರೋಪ ಸುಳ್ಳು. ಕಾಂಗ್ರೆಸ್‌ನವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದೆ, ಬೇರೆಯವರ ತಟ್ಟೆ ಹುಡುಕುತ್ತಿದ್ದಾರೆ.
-ಬೈರತಿ ಬಸವರಾಜ, ನಗರಾಭಿವೃದ್ಧಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT