ಶನಿವಾರ, ಮಾರ್ಚ್ 25, 2023
22 °C

ಬಸವಲಿಂಗ ಸ್ವಾಮೀಜಿಗೆ ‘ಕಾಯಕ ಜ್ಯೋತಿ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು:  ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಶಾಖಾಮಠದ ಬಸವಲಿಂಗ ಸ್ವಾಮೀಜಿ ಅವರು ‘ಕಾಯಕ ಜ್ಯೋತಿ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಹೊಸದುರ್ಗದ ಕರ್ನಾಟಕ ರಾಜ್ಯ ವಿಸ್ಮಯ, ಜಾದೂ, ಪವಾಡ ಹಾಗೂ ಮೋಡಿ ಸಂಶೋಧನಾ ವೇದಿಕೆ ರಾಜ್ಯೋತ್ಸವ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಿದೆ. ಮಠದ ಶೈಕ್ಷಣಿಕ, ಸಾಮಾಜಿಕ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ.7ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಠದ ಪಿ.ಆರ್. ಕಾಂತರಾಜ್ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.