ಸೋಮವಾರ, ಮೇ 23, 2022
30 °C

ಗಾಯಾಳು ಚಿಕಿತ್ಸೆಗೆ ನೆರವಾದ ಬಸವರಾಜ ಹೊರಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ತಾಲ್ಲೂಕಿನ ಕಲ್ಕುಂಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದವರ ಚಿಕಿತ್ಸೆಗೆ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಇಡಗುಂಜಿಯಿಂದ ರಾಷ್ಟ್ರೀಯ ಹೆದ್ದಾರಿ 48ರ ಮೂಲಕ ಕಾರೊಂದು ಬೆಂಗಳೂರಿಗೆ ಪ್ರಯಾಣ ಮಾಡುತ್ತಿತ್ತು. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ಕಲ್ಕುಂಟೆ ಸಮೀಪ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಇದೇ ಮಾರ್ಗದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಣ್ಣೆದುರೇ ಈ ಅಪಘಾತ ಸಂಭವಿಸಿದೆ. ತಕ್ಷಣ ನೆರವಿಗೆ ಧಾವಿಸಿದ ಹೊರಟ್ಟಿ, ಕಾರಿನಲ್ಲಿ ಸಿಲುಕಿದ್ದ ವರದರಾಜ, ಮಂಜುನಾಥ, ನಾಗೇಂದ್ರರಾವ್ ಮತ್ತು ಮೋಹನ್ ಕುಮಾರ್‌ ಅವರನ್ನು ರಕ್ಷಿಸಿದ್ದಾರೆ. ಪ್ರಥಮ ಚಿಕಿತ್ಸೆ ಕೊಡಿಸಿ, ಪೊಲೀಸರು ಹಾಗೂ ಆಂಬುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿದ್ದಾರೆ.

ಸುಮಾರು 45 ನಿಮಿಷ ಅಪಘಾತದ ಸ್ಥಳದಲ್ಲೇ ಇದ್ದು ಗಾಯಾಳು ಹಾಗೂ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಸಭಾಪತಿಯ ಈ ಕಾರ್ಯಕ್ಕೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು