ಸೋಮವಾರ, ಜೂನ್ 14, 2021
26 °C

ಕಾರು ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೊಳಕಾಲ್ಮುರು: ತಾಲ್ಲೂಕಿನ ಹಾನಗಲ್ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲಿಯೇ ಮೃತಪಟ್ಟಿದೆ.

ಈ ಘಟನೆಯೂ ಸೇರಿ ಒಂದೇ ತಿಂಗಳಲ್ಲಿ ತಾಲ್ಲೂಕಿನಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಕರಡಿಗಳು ಮೃತಪಟ್ಟಿವೆ.

ಮೃತ ಗಂಡು ಕರಡಿಗೆ 4-5 ವರ್ಷ ಇರಬಹುದು. ಡಿಕ್ಕಿಯ ರಭಸಕ್ಕೆ ತಲೆ ಮತ್ತು ಮುಖಕ್ಕೆ ಬಲವಾದ ಹೊಡೆತ ಬಿದ್ದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದೆ.

ಸಮೀಪದ ಗುಡ್ಡ ಮತ್ತು ಕೂಡ್ಲಿಗಿ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಕರಡಿಗಳು ವಾಸವಿದ್ದು, ರಾತ್ರಿ ವೇಳೆ ಆಹಾರ, ನೀರು ಹುಡುಕಿಕೊಂಡು ನಾಡಿಗೆ ಬರುವಾಗ ಇಂತಹ ಘಟನೆಗಳು ನಡೆಯುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಕಾರು ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿತ್ತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಅರಣ್ಯಾಧಿಕಾರಿ ಮಂಜುನಾಥ್, ಸ್ಥಳೀಯ ಅಧಿಕಾರಿ ಹಸನ್ ಬಾಷಾ, ಪಶು ವೈದ್ಯಾಧಿಕಾರಿ ಡಾ.ತಿಮ್ಮಣ್ಣ ಭೇಟಿ ನೀಡಿದ್ದರು.

ಪಟ್ಟಣದ ಎಂ.ಮಹದೇವಪ್ಪ ಸಸ್ಯಕ್ಷೇತ್ರ ಆವರಣದಲ್ಲಿ ಕರಡಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳು ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಾಣಿಪ್ರಿಯರು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು