ಶುಕ್ರವಾರ, ಸೆಪ್ಟೆಂಬರ್ 24, 2021
27 °C
ಹೈಟೆಕ್ ಗಣಿತ ಪ್ರಯೋಗಾಲಯ ಸ್ಥಾಪನೆ ಮತ್ತು ಅನುಷ್ಠಾನ

ರೇಖಲಗೆರೆಯ ಗಣಿತ ಶಿಕ್ಷಕ ರಂಗನಾಥ್‌ಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಯ ಗರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಯಕನಹಟ್ಟಿ: ಹೋಬಳಿಯ ರೇಖಲಗೆರೆ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಜಿ. ರಂಗನಾಥ ಅವರಿಗೆ ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಹಾಗೂ ಬೋಧನೆಯಲ್ಲಿ ನವೀನ ವಿಧಾನ ಅಳವಡಿಸಿಕೊಂಡು ಮಕ್ಕಳನ್ನು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸುವ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಹೋಬಳಿಯ ರೇಖಲಗೆರೆ ಲಂಬಾಣಿಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಜಿ. ರಂಗನಾಥ ಗಣಿತ ವಿಷಯದಲ್ಲಿ ಹಲವು ಅತ್ಯಾಧುನಿಕ ತಂತ್ರಜ್ಞಾನದ

ಮೂಲಕ ಹೊಸ ಪ್ರಯೋಗಗಳು, ಮಾದರಿಗಳ ಪಟ್ಟಿ ರಚಿಸಿ ಮಕ್ಕಳಿಗೆ ಸರಳವಾಗಿ ನಿರೂಪಿಸಿದ್ದರು. ಮತ್ತು ಲಾಕ್‌ಡೌನ್ ಅವಧಿಯಲ್ಲಿ ಮಕ್ಕಳ ಮನೆಗಳಲ್ಲಿಯೇ ಮಕ್ಕಳಿಂದಲೇ ಸರಳವಾದ ಮಾದರಿಗಳ ತಯಾರಿಕೆಗೆ ಉತ್ತೇಜನ ನೀಡಿದ್ದರು.

ಶಾಲೆಯಲ್ಲಿ 3 ವರ್ಷಗಳವರೆಗೂ ಪ್ರಭಾರ ಮುಖ್ಯಶಿಕ್ಷಕರಾಗಿ ತಂತ್ರಜ್ಞಾನ ಮತ್ತು ಪರಿಣಾಮಕಾರಿ ಬೋಧನೆಗಾಗಿ ಹೈಟೆಕ್ ಗಣಿತ ಪ್ರಯೋಗಾಲಯ ಸ್ಥಾಪನೆ ಮತ್ತು ಅನುಷ್ಠಾನ ಮಾಡಿದ್ದಾರೆ.

ಜತೆಗೆ ವಿಶ್ವಾಸ ಕಿರಣ ತರಬೇತಿ ಕೇಂದ್ರದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಗಣಿತ ಸಂಘದ ಖಜಾಂಚಿಯಾಗಿ, ತಾಲ್ಲೂಕು ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸತತ 14 ವರ್ಷಗಳಿಂದ ಪ್ರೌಢಶಾಲೆ ಹಂತದಲ್ಲಿ ಚಿತ್ರದುರ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಸೂಚನೆಯಂತೆ ರಾಜ್ಯಮಟ್ಟದಲ್ಲಿ ಗಣಿತ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಇಲಾಖೆ ಪ್ರಕಟಿತ 10 ಸಾಹಿತ್ಯ ಪುಸ್ತಕಗಳ ರಚನೆಯಲ್ಲಿ ಪ್ರಧಾನ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.

ಹಾಗಾಗಿ ಇವರಿಗೆ 2012-13 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸಾಧಕ ಶಿಕ್ಷಕ ಪ್ರಶಸ್ತಿ, 2019-20ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2020-21ನೇ ಅಂತರಾಷ್ಟ್ರೀಯ ಮಟ್ಟದ ಗ್ಲೋಬಲ್ ಟೀಚರ್ ಅವಾರ್ಡ್, ರಾಷ್ಟ್ರೀಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, 2020-21ನೇ ಸಾಲಿನ ರಾಷ್ಟ್ರೀಯ ಮಟ್ಟದ ಪಿಸಿಎಂ ಶಿಕ್ಷಕ ಪ್ರಶಸ್ತಿ ಲಭಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.