ಚಳ್ಳಕೆರೆ:ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿಸುವ ನೆಪದಲ್ಲಿ ಜಿಲ್ಲೆಯಲ್ಲಿ ಉದ್ಭವ ಮೂರ್ತಿಗಳು ಹೆಚ್ಚಾಗುತ್ತಿದ್ದಾರೆ ಎಂದು ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ವ್ಯಂಗ್ಯವಾಡಿದರು.
ಇಲ್ಲಿನ ಶಾಸಕರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭದ್ರಾ ಮೇಲ್ದಂಡೆ ಯೋಜನೆಗೆ ₹ 12 ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಆದರೆ ಬಿಜೆಪಿ ಸರ್ಕಾರ ಕೇವಲ ₹ 5 ಕೋಟಿ ಬಿಡುಗಡೆಮಾಡಿ ಸಾಧನೆ ಮಾಡಿದೆ. ಇದನ್ನೇ ಬಿಜೆಪಿ ನಾಯಕರು ಹೇಳುತ್ತಾರೆ ಎಂದು ದೂರಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕಟಿ.ರಘುಮೂರ್ತಿ, ‘ಜನರ ಆರೋಗ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಜಾರಿಗೊಳಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ತಪ್ಪದೇ ಅನುಷ್ಠಾನಗೊಳಿಸಬೇಕು’ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಮೂಲಕ ಕೊರೊನಾ ವೈರಸ್ ತಡೆಯಲು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಬಲಗೊಳಿಸಬೇಕು ಎಂದು ಹೇಳಿದರು.
ಕೆಪಿಸಿಸಿ ವೈದ್ಯಕೀಯ ಘಟಕ ರಾಜ್ಯಾಧ್ಯಕ್ಷ ಡಾ.ರಾಘವೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಪ್ರಸನ್ನಕುಮಾರ್ ಮಾತನಾಡಿದರು.
ತಾಲ್ಲೂಕು ಉಪಾಧ್ಯಕ್ಷ ಪಿ. ತಿಪ್ಪೇಸ್ವಾಮಿ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್‍ಶಂಕರ್, ಅಧ್ಯಕ್ಷೆ ಮಂಜುಳಮ್ಮ, ಮಾಜಿ ಅಧ್ಯಕ್ಷ ಟಿ.ಎ.ಟಿ. ಪ್ರಭುದೇವ್, ಮಹಿಳಾ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷೆ ಗೀತಾಬಾಯಿ, ಸುರೇಶ್‍ಬಾಲಕೃಷ್ಣ ಯಾದವ್, ಮುಖಂಡ ಪರಶುರಾಂಪುರದ ಚನ್ನಕೇಶವ, ಜಯಣ್ಣ, ಮೂಡಲಗಿರಿಯಪ್ಪ, ಎಚ್.ಎಸ್.ಸೈಯದ್, ಕರೀಕೆರೆ ರಾಜಣ್ಣ, ಚೌಳೂರು ಪ್ರಕಾಶ್, ಆಸ್ಪತ್ರೆ ರಕ್ಷಾ ಸಮಿತಿ ಸದಸ್ಯ ಇಸ್ಮಾಯಿಲ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.