ಹಿರಿಯೂರು: ‘ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ 2008 ರಿಂದ ಜನಪ್ರತಿನಿಧಿಗಳ ಹೇಳಿಕೆಗಳನ್ನು ಕೇಳಿ ಬೇಸತ್ತು ಹೋಗಿದ್ದೇವೆ. ಇನ್ನಾದರೂ ಜನರ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡಬಾರದು’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ತಾಕೀತು ಮಾಡಿದರು.

ತಾಲ್ಲೂಕಿನ ವಾಣಿವಿಲಾಸಪುರದಲ್ಲಿ ಮಂಗಳವಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ರೈತ ಮುಖಂಡರು ಕಣಿವೆ ಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ದೇವಸ್ಥಾನದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

‘ನಮ್ಮ ಈ ಬಾರಿಯ ಚಳವಳಿಯು ಜಿಲ್ಲೆಗೆ ಸಮಗ್ರ ನೀರಾವರಿ ಕಲ್ಪಿಸಬೇಕು ಎಂಬುದಕ್ಕೆ ಸೀಮಿತವಾಗಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತಂದು ನಮ್ಮ ನೀರಿನ ಹಕ್ಕು ಪಡೆಯಬೇಕು’ ಎಂದು ಸಲಹೆ ನೀಡಿದರು.

‘ಮೈಸೂರು ಸಂಸ್ಥಾನಕ್ಕೆ ಸಂಬಂಧವೇ ಇಲ್ಲದ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಬಯಲುಸೀಮೆಯ ಜನರ ನೀರಿನ ಕಷ್ಟ ಅರಿತು ಕುಟುಂಬದ ಒಡವೆಗಳನ್ನು ಒತ್ತೆ ಇಟ್ಟು ನಿರ್ಮಿಸಿದ ಜಲಾಶಯವನ್ನು ಉಳಿಸುವ ಯೋಗ್ಯತೆ ಜನಪ್ರತಿನಿಧಿಗಳಿಗೆ ಇಲ್ಲವಾಗಿರುವುದು ಈ ಭಾಗದ ರೈತರ ದುರಾದೃಷ್ಟ. 2017 ರಲ್ಲಿ ಜಲಾಶಯ ಡೆಡ್ ಸ್ಟೋರೇಜ್ ತಲುಪಿ 17 ಸಾವಿರ ಎಕರೆಯಷ್ಟು ಅಡಿಕೆ–ತೆಂಗಿನ ತೋಟಗಳು ಒಣಗಿದ್ದನ್ನು ರೈತರು ಎಂದೂ ಮರೆಯಲಾರರು. ಮತ್ತೆ ಅಂತಹ ಪರಿಸ್ಥಿತಿ ಬರಬಾರದು ಎಂದರೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ಎಚ್ಚರಿಸಿದರು.

‘ಇದುವರೆಗೂ ಆಳುವವರ ಸಬೂಬು ಕೇಳಿ ಸಾಕಾಗಿದೆ. ಜಿಲ್ಲೆಯ ಎಲ್ಲ ರೈತರು ಒಟ್ಟುಗೂಡಿ ಹೋರಾಟವನ್ನು ತೀವ್ರಗೊಳಿಸಬೇಕಾಗಿದೆ. ಕೇಂದ್ರ ಸರ್ಕಾರ ಎರಡು ವರ್ಷದ ಹಿಂದೆ ಘೋಷಿಸಿರುವಂತೆ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಕನಿಷ್ಠ ₹5 ಸಾವಿರ ಕೋಟಿ ಅನುದಾನವನ್ನು ಯೋಜನೆಗೆ ಮೀಸಲಿಡಬೇಕು. ಜಿಲ್ಲೆಯ ಎಲ್ಲಾ ಮಣ್ಣಿನ ಕೆರೆಗಳಿಗೆ ಲಿಫ್ಟ್ ಹಾಗೂ ಸಹಜ ಹರಿವಿನ ಮೂಲಕ ನೀರು ತುಂಬಿಸಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳ ಮುಂಭಾಗದಲ್ಲಿ ಜ.30 ರಂದು ಸಾಂಕೇತಿಕ ಧರಣಿ ನಡೆಸೋಣ. ಸರ್ಕಾರ ಸ್ಪಂದಿಸದೇ ಹೋದರೆ ಜಿಲ್ಲಾ ಬಂದ್ಗೆ ಕರೆ ಕೊಡೋಣ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕೋಣ’ ಎಂದು ಘೋಷಿಸಿದರು.

ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ‘ಆಳುವ ಸರ್ಕಾರಗಳು ಒಂದಲ್ಲ ಒಂದು ರೀತಿ ಜಿಲ್ಲೆಯ ಜನರಿಗೆ ಮೋಸ ಮಾಡುತ್ತಲೇ ಬಂದಿವೆ. ಕೇವಲ ನೀರು ಬಂದರೆ ಸಾಲದು, ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸ್ವಾಮಿನಾಥನ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಘಟಿತ ಹೋರಾಟ ನಡೆಸೋಣ’ ಎಂದು ಸಲಹೆ ನೀಡಿದರು.

ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬಸವರೆಡ್ಡಿ ಮಾತನಾಡಿದರು. ಮೊಳಕಾಲ್ಮೂರು ತಾಲ್ಲೂಕು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ನಾಗರಾಜ್, ಹಿರಿಯೂರಿನ ಆಲೂರು ಸಿದ್ದರಾಮಣ್ಣ, ಹೊಳಲ್ಕೆರೆಯ ರಂಗಸ್ವಾಮಿ, ಹೊಸದುರ್ಗದ ಚಿತ್ತಪ್ಪ, ಚಳ್ಳಕೆರೆಯ ರಾಜಣ್ಣ, ಪದಾಧಿಕಾರಿಗಳಾದ ಬುಡ್ನಟ್ಟಿ ತಿಪ್ಪೇಸ್ವಾಮಿ, ಚನ್ನಕೇಶವಮೂರ್ತಿ, ವೀರಭದ್ರಪ್ಪ, ಜಯ್ಯಣ್ಣ, ಬಸವರಾಜ್, ನಿರಂಜನಮೂರ್ತಿ, ಸಣ್ಣತಿಮ್ಮಣ್ಣ, ಶಿವಣ್ಣ, ರಂಗಸ್ವಾಮಿ, ಶ್ರೀಕಂಠಮೂರ್ತಿ, ಗೋವಿಂದರಾಜ್, ನಾಗರಾಜ್, ನಟರಾಜ್, ಹನುಮಂತಪ್ಪ, ಚಿಕ್ಕಣ್ಣ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.