ಚಿತ್ರದುರ್ಗ: ಕಾನೂನು ತೊಡಕು ನಿವಾರಿಸಿ ಕೂಡಲೇ ರಾಜ್ಯದಲ್ಲಿರುವ ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಫೆಬ್ರುವರಿ 10ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ತಿಳಿಸಿದರು.

‘ರಾಜ್ಯದಲ್ಲಿ ಸರ್ಕಾರಿ ಕಂದಾಯ ಭೂಮಿ, ಗೋಮಾಳ, ಖರಾಬು ಸೇರಿ ಲಕ್ಷಾಂತರ ಎಕರೆ ಭೂಮಿಯಲ್ಲಿ ಕುಟುಂಬಗಳು ಉಳುಮೆ ಮಾಡುತ್ತಾ ಜೀವನ ಸಾಗಿಸುತ್ತಿವೆ. ಈ ಭೂಮಿ ಹಕ್ಕಿಗಾಗಿ ದಶಕಗಳಿಂದ ಅರ್ಜಿ ಸಲ್ಲಿಸಿ ಹಕ್ಕಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ನಿರ್ಲಕ್ಷ್ಯ ವಹಿಸಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ರಾಜ್ಯದಲ್ಲಿ 25 ಲಕ್ಷ ಅರ್ಜಿಗಳು ಬಾಕಿಯಿದ್ದು, ಸಾಮಾಜಿಕ ಭದ್ರತೆ, ಬಡವರ ರಕ್ಷಣೆಗಾಗಿ ಕಾನೂನು ಬದಲಾವಣೆ ಮಾಡಿ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ಕೊಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು.

‘ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ಭೂರಹಿತರಿಗೆ ಭೂಮಿಯ ಹಕ್ಕುಪತ್ರ ನೀಡಬೇಕು. ಅರ್ಜಿ ಸಲ್ಲಿಸಿದ ರೈತರನ್ನು ಯಾವುದೇ ಕಾರಣಕ್ಕೂ ಭೂಮಿಯಿಂದ ಒಕ್ಕಲೇಳಿಸಬಾರದು. ಅರಣ್ಯ ಹಕ್ಕು ಕಾಯ್ದೆ 2006ನ್ನು ಜಾರಿ ಮಾಡುವ ಮೂಲಕ ಅರಣ್ಯವಾಸಿಗಳಿಗೆ ಭೂಮಿ ಮತ್ತು ಅವರು ವಾಸಿಸುವ ಜಾಗಗಳಿಗೆ ಮಂಜೂರಾತಿ ನೀಡಬೇಕು. ಅರಣ್ಯ-ಕಂದಾಯ ಭೂಮಿಗಳ ಜಂಟಿ ಸರ್ವೆ ನಡೆಸಿ, ಭೂರಹಿತರ ಸಾಗುವಳಿ ಭೂಮಿಗಳಿಗೆ ಹಕ್ಕುಪತ್ರ ನೀಡಬೇಕು. ಅರಣ್ಯ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

‘ಸಾಗುವಳಿ ಹಕ್ಕುಪತ್ರಕ್ಕಾಗಿ ಜಿಲ್ಲೆಯಿಂದ 52 ಸಾವಿರ ಅರ್ಜಿ ಸಲ್ಲಿಸಲಾಗಿದೆ. ಅನಾದಿ ಕಾಲದಿಂದಲೂ ಜೀವನೋಪಾಯಕ್ಕಾಗಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಲು ಭೂಮಿ ಇಲ್ಲ ಎನ್ನುತ್ತಿರುವ ಸರ್ಕಾರ ಕಂಪನಿಗಳಿಗೆ ಭೂಮಿ ನೀಡಲು ತುದಿಗಾಲಲ್ಲಿ ನಿಂತಿದೆ. ಸ್ಥಳೀಯವಾಗಿ ಶಾಸಕರು ಧ್ವನಿ ಎತ್ತುತ್ತಿಲ್ಲ’ ಎಂದು ಮುಖಂಡ ಸತ್ಯಪ್ಪ ಮಲ್ಲಾಪುರ ದೂರಿದರು.

‘ಬಗರ್ಹುಕುಂ ಸಮಿತಿ ಸಭೆಗಳು ನಡೆದಿಲ್ಲ. ಬಾಕಿಯಿರುವ ಅರ್ಜಿಗಳನ್ನು ಪರಿಗಣಿಸಿ ತುರ್ತಾಗಿ ಸಾಗುವಳಿ ಚೀಟಿಗಳನ್ನು ನೀಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಎಚ್. ವೆಂಕಟೇಶ್, ಹನುಮಂತಪ್ಪ, ರಾಮಚಂದ್ರಪ್ಪ, ಹನುಮಂತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.