ಚಿತ್ರದುರ್ಗ: ‘ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯ 16ನೇ ಪಟ್ಟಾಭಿಷೇಕ ಮಹೋತ್ಸವವನ್ನು ಜುಲೈ 18ರಂದು ಭೋವಿ ಗುರುಪೀಠದಲ್ಲಿ ಆಯೋಜಿಸಲಾಗಿದೆ’ ಎಂದು ಭೋವಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ ತಿಳಿಸಿದರು.

‘ಸ್ವಾಮೀಜಿಯವರ ಅವಿರತ ಶ್ರಮದಿಂದ ಭೋವಿ ಗುರುಪೀಠ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ. ಅಂದು ಬೆಳಿಗ್ಗೆಯಿಂದಲೇ ಮಠದಲ್ಲಿ ಸೇವಾಕಾರ್ಯಗಳು ಪ್ರಾರಂಭವಾಗಲಿವೆ. ಜತೆಗೆ ಸ್ವಾಮೀಜಿಯ 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ, ವಧು– ವರರ ಸಮಾವೇಶ, ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ನ ವಿರೋಧ ಪಕ್ಷದ ಉಪನಾಯಕ ಸುನೀಲ್ ವಲ್ಯಾಪುರ, ಶಾಸಕರಾದ ಎಂ.ಚಂದ್ರಪ್ಪ, ಎಸ್.ರಘು, ಮಾನಪ್ಪ ವಜ್ಜಲ್, ಎ.ಸಿ.ಶ್ರೀನಿವಾಸ್, ವಿ.ವೆಂಕಟೇಶ್ ಸೇರಿದಂತೆ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

‘ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 25 ಲಕ್ಷಕ್ಕೂ ಹೆಚ್ಚು ಪ್ರೋತ್ಸಾಹಧನ ವಿತರಿಸಲಾಗುತ್ತದೆ. ಮಹೋತ್ಸವಕ್ಕೆ ಈಗಾಗಲೇ ಅಗತ್ಯ ಸಿದ್ಧತೆ ನಡೆಸಲಾಗಿದೆ’ ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಎಚ್.ಲಕ್ಷ್ಮಣ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಡಿ.ಸಿ.ಮೋಹನ್, ಎಚ್.ಆಂಜನೇಯ, ಗುರುಪೀಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ನಿರ್ದೇಶಕರಾದ ಟಿ.ದೇವರಾಜ್, ತಿಮ್ಮಣ್ಣ, ಪ್ರಕಾಶ್, ವೆಂಕಟಪತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.