ಮೊಳಕಾಲ್ಮುರು: ಅತಿ ಹೆಚ್ಚು ಕೋಳಿ
‘ಜಿಲ್ಲೆಯಲ್ಲಿ 337 ಕೋಳಿ ಫಾರಂಗಳು ಇದ್ದು ಮಾಂಸದ ಕೋಳಿಗಳು ಮತ್ತು ಮೊಟ್ಟೆ ಕೋಳಿ ಸೇರಿದಂತೆ ಒಟ್ಟು 60.37 ಲಕ್ಷ ಕೋಳಿಗಳಿವೆ. ಸುಮಾರು 9 ಲಕ್ಷ ನಾಟಿ ಕೋಳಿಗಳಿವೆ. ಮೊಳಕಾಲ್ಮುರು ತಾಲ್ಲೂಕು ಒಂದರಲ್ಲೇ 34 ಲಕ್ಷ ಕೋಳಿಗಳಿವೆ’ ಎಂದು ಡಾ.ಕುಮಾರ್ ತಿಳಿಸಿದರು. ‘ಹಕ್ಕಿಜ್ವರ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯನ್ನು ಸಂಪರ್ಕಿಸುವ ಚಳ್ಳಕೆರೆ ತಾಲ್ಲೂಕಿನ ನಾಗಪ್ಪನಹಳ್ಳಿ ಗೇಟ್ ಹಿರಿಯೂರು ತಾಲ್ಲೂಕಿನ ಪಿ.ಡಿ.ಕೋಟೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಎದ್ದಲ್ಲಬೊಮ್ಮನಹಟ್ಟಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲಾಗಿದೆ. ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ದಿನನಿತ್ಯವೂ ಕೋಳಿ ಕೋಳಿ ಮೊಟ್ಟೆ ಕೋಳಿ ಆಹಾರ ತಪಾಸಣೆ ನಡೆಸಲಾಗುತ್ತಿದೆ’ ಎಂದರು.