ಬುಧವಾರ, ಫೆಬ್ರವರಿ 1, 2023
18 °C
‘ಬಿಜೆಪಿ ಬೂತ್‌ ವಿಜಯ’ ಅಭಿಯಾನದಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿಕೆ

ಎಲ್ಲರನ್ನು ಸಮಾನವಾಗಿ ಕಾಣುವ ಪಕ್ಷ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ತಾಲ್ಲೂಕಿನ ಮಲ್ಲಾಪುರ ಗೊಲ್ಲರಹಟ್ಟಿಯಲ್ಲಿ ಬಿಜೆಪಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ‘ಬಿಜೆಪಿ ಬೂತ್‌ ವಿಜಯ’ ಅಭಿಯಾನಕ್ಕೆ ಸೋಮವಾರ ಚಾಲನೆ ದೊರಕಿತು.

ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ‘ಬಿಜೆಪಿ ಒಂದು ಜಾತಿ, ಧರ್ಮಕ್ಕೆ ಸಿಮೀತವಾಗದೆ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ. ಸದಾ ಒಂದಲ್ಲ ಒಂದು ಕಾರ್ಯಕ್ರಮದ ಮೂಲಕ ಜನರ ಮಧ್ಯೆ ಪಕ್ಷ ಕೆಲಸ ಮಾಡುತ್ತಿದೆ. ದೇಶದಲ್ಲಿ ಶಾಂತಿ ನೆಲೆಸಬೇಕೆಂದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ’ ಎಂದರು.

‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ನೂರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸಿಸಿ ರಸ್ತೆ, ಉದ್ಯಾನ, ಚೆಕ್‌ಡ್ಯಾಂ, ಶಾಲಾ ಕಟ್ಟಡಗಳು ಹೀಗೆ ಸಾಕಷ್ಟು ಕೆಲಸಗಳು ನಡೆದಿವೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆಗಿರುವ ಅಭಿವೃದ್ಧಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಆಗ ಮಾತ್ರ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ವಿಜಯೋತ್ಸವ ಆಚರಿಸಲು ಸಾಧ್ಯ’ ಎಂದರು.‌

ಮಲ್ಲಾಪುರ ಗೊಲ್ಲರಹಟ್ಟಿಯ ಬೂತ್‌ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ನಿವಾಸದ ಮೇಲೆ ಪಕ್ಷದ ಬಾವುಟ ಹಾರಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಉಪಾಧ್ಯಕ್ಷೆ ಚಂದ್ರಿಕಾ ಲೋಕನಾಥ್‌, ಮಂಡಲ ಉಸ್ತುವಾರಿಗಳಾದ ಎ.ರೇಖಾ, ಶಿವಣ್ಣಾಚಾರ್‌, ಪ್ರಧಾನ ಕಾರ್ಯದರ್ಶಿಗಳಾದ ವಸಂತ, ವೀರೇಶ್‌, ಮುಖಂಡ ಡಾ.ಸಿದ್ದಾರ್ಥ್‌ ಗುಂಡಾರ್ಪಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು