ಶನಿವಾರ, ಮಾರ್ಚ್ 25, 2023
31 °C

‘ಸಿದ್ದರಾಮಯ್ಯ ಎಲ್ಲೇ ಚುನಾವಣೆಗೆ ನಿಂತರೂ ಸೋಲಿಸುತ್ತೇವೆ’–ಕೆ.ಎಸ್‌.ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಎಸ್‌.ಈಶ್ವರಪ್ಪ

ಚಿತ್ರದುರ್ಗ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಯಾವ ಮೂಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದರೂ ಸೋಲಿಸುತ್ತೇವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಜಿರೋನಾ ಅಥವಾ ಹಿರೋನಾ ಎಂಬುದು ಗೊತ್ತಾಗಿದೆ. ಹಾನಗಲ್‌ ವಿಧಾನಸಭಾ ಕ್ಷೇತ್ರ ಗೆದ್ದ ಕಾಂಗ್ರೆಸ್‌, ಇಡೀ ದೇಶವನ್ನು ಗೆದ್ದಿರುವಂತೆ ಬೀಗುತ್ತಿದೆ. ಕಾಂಗ್ರೆಸ್, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನೋಡಿ ಜನ‌ ಮತ ನೀಡಿಲ್ಲ’ ಎಂದು ಹೇಳಿದರು.

‘ದೇಶದಲ್ಲಿ ಕಾಂಗ್ರೆಸ್‌ ಈಗಾಗಲೇ ಪ್ರಾದೇಶಿಕ ಪಕ್ಷದಂತೆ ಆಗಿದೆ. ತಮಿಳುನಾಡು, ಕೇರಳ, ತೆಲಂಗಾಣ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಕರ್ನಾಟಕದಲ್ಲಿ ಒಂಚೂರು ಜೀವ ಹಿಡಿದುಕೊಂಡಿದೆ. ಸಿದ್ದರಾಮಯ್ಯ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ದಲಿತರ ಬಗೆಗೆ ಆಡಿದ ಮಾತಿಗೆ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು