ಬುಧವಾರ, ಮಾರ್ಚ್ 29, 2023
32 °C
ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪ್ರತಿಭಟನೆ

ಚಿತ್ರದುರ್ಗ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ದಲಿತ’ ಸಮುದಾಯದವರ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

‘ದಲಿತ ಸಮುದಾಯದವರ ಕುರಿತು ಅವರಿಗೆ ಕಾಳಜಿ ಇಲ್ಲ. ಹೀಗಾಗಿಯೇ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಅಂಬೇಡ್ಕರ್ ವೃತ್ತದ ಎದುರು ಧಿಕ್ಕಾರ ಕೂಗಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರಳಿ, ‘ದಲಿತ ಸಮುದಾಯದವರ ಮೇಲೆ ಕಾಂಗ್ರೆಸ್‌ನಿಂದ ಶೋಷಣೆ ಆಗುತ್ತಿದೆಯೇ ಹೊರತು ಬಿಜೆಪಿಯಿಂದ ಅಲ್ಲ. ಶ್ರೇಷ್ಠ ಸಂವಿಧಾನವನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಸೋಲಿಗೆ ಕಾಂಗ್ರೆಸ್ ಕಾರಣ. ಆ ಪಕ್ಷದ ಮುಖಂಡರ ನಾಟಕೀಯ ಮಾತುಗಳು ಜನರಿಗೆ ಈಗಾಗಲೇ ಅರ್ಥವಾಗಿದೆ’ ಎಂದರು.

‘ಈ ಸಮುದಾಯದಿಂದ ಸ್ಪರ್ಧಿಸಿ ಗೆದ್ದ ಶಾಸಕರ, ಸಂಸದರ ಸಂಖ್ಯೆ ಹೆಚ್ಚಿರುವುದು ಬಿಜೆಪಿಯಲ್ಲಿ ಮಾತ್ರ. ಬೇರೆ ಯಾವ ಪಕ್ಷದಲ್ಲಿಯೂ ಇಲ್ಲ. ಇನ್ನಾದರೂ ಸಿದ್ದರಾಮಯ್ಯ ಅವರು ಹಗುರವಾಗಿ ಮಾತನಾಡುವುದನ್ನು ಬಿಟ್ಟು, ಬಹಿರಂಗವಾಗಿ ದಲಿತ ಸಮುದಾಯದವರಲ್ಲಿ ಕ್ಷಮೆ ಕೇಳಬೇಕು’ ಎಂದು ಒತ್ತಾಯಿಸಿದರು.

ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ‘ದಲಿತರ ಬಗ್ಗೆ ಸಿದ್ದರಾಮಯ್ಯ ಅವರು ಕೀಳಾಗಿ ಮಾತನಾಡಿದ್ದಾರೆ. ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ್ದು ಇವರೇ. ಕಾಂಗ್ರೆಸ್‌ ಈ ಸಮುದಾಯಕ್ಕೆ ನೀಡಿರುವ ಕೊಡುಗೆ ಏನು’ ಎಂದು ಪ್ರಶ್ನಿಸಿದರು.

ಮುಖಂಡರಾದ ಪರಶುರಾಂ, ತಿಮ್ಮಣ್ಣ, ನಾಗರಾಜ್, ಸಿದ್ಧಾರ್ಥ, ಶಿವದತ್, ಜೈಪಾಲಯ್ಯ, ಎಚ್.ಬಿ. ನರೇಂದ್ರ, ವೆಂಕಟೇಶ್‌ ಯಾದವ್, ಸಂಪತ್, ಶೈಲಜಾ ರೆಡ್ಡಿ, ರೇಖಾ, ನಂದಿ ನಾಗರಾಜ್, ನಾಗರಾಜ್‌ ಬೇದ್ರೆ, ದಗ್ಗೆ ಶಿವಪ್ರಕಾಶ್, ಶಂಭು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.