ಬುಧವಾರ, ಜುಲೈ 6, 2022
22 °C

ಅಧಿವೇಶನ ವ್ಯರ್ಥ ಮಾಡಿದ ಕಾಂಗ್ರೆಸ್‌ನಿಂದ ಹಿಂದೂ ವಿರೋಧಿ ಧೋರಣೆ; ಬಿಜೆಪಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ವಿಧಾನಮಂಡಲ ಅಧಿವೇಶನವನ್ನು ಕಾಂಗ್ರೆಸ್ ವ್ಯರ್ಥ ಮಾಡಿದೆ ಹಾಗೂ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಎಸ್‌ಬಿಐ ವೃತ್ತದಿಂದ ಮೆರವಣಿಗೆ ಹೊರಟ ಬಿಜೆಪಿ ಕಾರ್ಯಕರ್ತರು ಒನಕೆ ಓಬವ್ವ ವೃತ್ತದ ವರೆಗೆ ಮೆರವಣಿಗೆ ನಡೆಸಿದರು. ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, 70 ವರ್ಷ ದೇಶ ಆಳಿದ ಕಾಂಗ್ರೆಸ್, ವಿಧಾನಮಂಡಲ ಅಧಿವೇಶನ ನಡೆಸಲು ಅವಕಾಶ ನೀಡಲಿಲ್ಲ. ಹಲವು ವರ್ಷಗಳಿಂದ ಜನರನ್ನು ಮೋಸ ಮಾಡಿದೆ. ಅಧಿಕಾರ ಕಳೆದುಕೊಂಡು ಮೀನಿನಂತೆ ಒದ್ದಾಡುತ್ತಿದೆ ಎಂದು ಅರೋಪಿಸಿದರು.

ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡುತ್ತಿದೆ. ಬಿಜೆಪಿ ಬಗ್ಗೆ ರಾಜ್ಯದಲ್ಲಿ ಉತ್ತಮ ಅಭಿಪ್ರಾಯ ಮೂಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಮತ ಬಿಜೆಪಿಗೆ ಹೋಗುತ್ತವೆ ಎಂಬುದನ್ನು ಮನಗಂಡು ಕಾಂಗ್ರೆಸ್ ವಿನಾಕಾರಣ ವಿವಾದ ಸೃಷ್ಟಿಸುತ್ತಿದೆ ಎಂದು ದೂರಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್, ಯುವಮೋರ್ಚಾ ಅಧ್ಯಕ್ಷ ಹನುಮಂತೇಗೌಡ ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು