ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಗೋವಿಂದ ಕಾರಜೋಳ

Published 18 ಏಪ್ರಿಲ್ 2024, 16:32 IST
Last Updated 18 ಏಪ್ರಿಲ್ 2024, 16:32 IST
ಅಕ್ಷರ ಗಾತ್ರ

ಸಿರಿಗೆರೆ: ‘ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಪಕ್ಷಕ್ಕೆ ಭಾರೀ ಜಯ ಸಿಗುತ್ತದೆ’ ಎಂದು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತಿಳಿಸಿದರು.

‘ಸಿರಿಗೆರೆಯಲ್ಲಿ ಗುರುವಾರ ಸಂಜೆ ಮಾಧ್ಯಮದವರೊಡನೆ ಮಾತನಾಡಿದ ಅವರು ಈಗಾಗಲೇ ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸುತ್ತು ಹಾಕಿದ್ದೇವೆ. ಎಲ್ಲೆಡೆ ಬಿಜೆಪಿ ಬಗ್ಗೆ ಮತದಾರರಲ್ಲಿ ಒಲವು ಇದೆ’ ಎಂದರು.

‘ಪ್ರಧಾನಿ ಮೋದಿ ಅವರು ಹತ್ತು ವರ್ಷಗಳಲ್ಲಿ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಮತದಾರರು ವಿಶ್ವಾಸ ತಾಳಿದ್ದಾರೆ. ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕುರಿತು ಜನರು ಯೋಚಿಸುತ್ತಿದ್ದಾರೆ. ಈ ಬಾರಿ ಗೆಲುವು ನಮಗೇ ಸಿಗಲಿದೆ’ ಎಂದರು.

ನಾಳೆ ಎಚ್‌ಡಿಕೆ ಪ್ರವಾಸ: ‘ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಹೊಳಲ್ಕೆರೆ ಕ್ಷೇತ್ರದ ನಾಲ್ಕು ಕಡೆ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರ ಮಾಡಲಿದ್ದಾರೆ. 24ರಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.‌ಯಡಿಯೂರಪ್ಪ ಅವರು ಸಹ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ’ ಎಂದು ತಿಳಿಸಿದರು.

ಸ್ಥಳೀಯ ಬಿಜೆಪಿ ಮುಖಂಡ ಕೆ.ಎನ್.‌ ಬಸವಂತಪ್ಪ ಅವರನ್ನು ಭೇಟಿ ಮಾಡಿದ್ದ ಕಾರಜೋಳ, ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ಸ್ಥಳೀಯ ಮುಖಂಡರಾದ ಶೈಲೇಶ್‌, ಕೆ.ಎನ್.‌ ಮೋಹನ್‌, ಹಂಚಿನಮನೆ ಸಂದೀಪ ಮುಂತಾದವರು ಜೊತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT