ಮಂಗಳವಾರ, ಜುಲೈ 27, 2021
23 °C

ಚಿತ್ರದುರ್ಗ: ಕೆಳದವಡೆಯಲ್ಲೂ ಕಪ್ಪು ಶಿಲೀಂಧ್ರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಇಲ್ಲಿಯ ಎಸ್‌ಜೆಎಂ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶನಿವಾರ ರೋಗಿಯೊಬ್ಬರ ಕೆಳದವಡೆಯಲ್ಲಿ ‘ಕಪ್ಪು ಶಿಲೀಂಧ್ರ’ ಬೆಳೆದಿರುವ ಪ್ರಕರಣ ಪತ್ತೆಯಾಗಿದೆ.

‘ಸಾಮಾನ್ಯವಾಗಿ ಕಪ್ಪು ಶಿಲೀಂಧ್ರ ಮೇಲಿನ ದವಡೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಉಳಿದಂತೆ ಶೇ 3ರಷ್ಟು ರೋಗಿಗಳಲ್ಲಿ ಮಾತ್ರ ಕೆಳದವಡೆಯಲ್ಲಿ ರೋಗಲಕ್ಷಣ ಕಂಡುಬರುತ್ತದೆ. ಚಿತ್ರದುರ್ಗದಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ’ ಎಂದು ಮುಖದವಡೆ ಮತ್ತು ಬಾಯಿ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ನಾಗರಾಜಪ್ಪ ತಿಳಿಸಿದ್ದಾರೆ.

‘ಹಲ್ಲು ನೋವಿನಿಂದ ಬಳಲುತ್ತಿದ್ದ ರೋಗಿಯನ್ನು ತಪಾಸಣೆ ಮಾಡಿದ ಡಾ.ತನ್ವೀರ್ ಅಹಮದ್, ಡಾ.ಮಧುಮತಿ ಈ ಪ್ರಕರಣ ಪತ್ತೆ ಹಚ್ಚಿದ್ದಾರೆ. ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯರ ತಂಡವು ರೋಗಿಗೆ ಚಿಕಿತ್ಸೆ ನೀಡಲಿದೆ’ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಗೌರಮ್ಮ ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು