ಮಂಗಳವಾರ, ಅಕ್ಟೋಬರ್ 26, 2021
20 °C

ಅ.9ಕ್ಕೆ ‘ವೈಷ್ಣವ ಜನತೋ’ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಗಾಂಧಿ ಮತ್ತು ಅಂಬೇಡ್ಕರ ಅವರ ತತ್ವಸಿದ್ಧಾಂತವನ್ನು ಸಮನ್ವಯಗೊಳಿಸಿ ಸಾಹಿತಿ ಡಾ.ಲೋಕೇಶ ಅಗಸನಕಟ್ಟೆ ರಚಿಸಿದ ‘ವೈಷ್ಣವ ಜನತೋ’ ಕಾದಂಬರಿ ಅ.9ರಂದು ಲೋಕಾರ್ಪಣೆಗೊಳ್ಳಲಿದೆ.

ಚಿತ್ರದುರ್ಗದ ಗೆಳೆಯರ ಬಳಗ ಹಾಗೂ ಶಿವಮೊಗ್ಗದ ಅಹರ್ನಿಶಿ ಪ್ರಕಾಶನದ ವತಿಯಿಂದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ.ಬಿ. ಕೃಷ್ಣಪ್ಪನವರ ಬಹುದಿನದ ಒಡನಾಡಿ ರುದ್ರಪ್ಪ ಹನಗವಾಡಿ ಅವರು ಈ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕೃತಿ ಕುರಿತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್‌ ಮಾತನಾಡಲಿದ್ದಾರೆ. ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮೂರು ದಶಕಗಳಿಂದ ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡು ಕಥೆ, ವಿಮರ್ಶೆ, ನಾಟಕ, ಕಾವ್ಯ ಬರೆದಿರುವ ಅಗಸನಕಟ್ಟೆ ಅವರ ಎರಡನೇ ಕಾದಂಬರಿ ಇದಾಗಿದೆ. ಗಾಂಧೀಜಿ ಅವರಿಗೆ ಪ್ರಿಯವಾದ ‘ವೈಷ್ಣವ ಜನತೋ’ ಭಜನೆಯ ಶೀರ್ಷಿಕೆಯನ್ನು ಕಾದಂಬರಿಗೆ ಬಳಸಿಕೊಳ್ಳಲಾಗಿದೆ. ಚಿಂತಕರಾದ ಡಾ. ಕೆ.ವಿ.ನಾರಾಯಣ ಹಾಗೂ ರಾಜೇಂದ್ರ ಚೆನ್ನಿ ಅವರು ಬೆನ್ನುಡಿ ಬರೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.