ಹಿರಿಯೂರು: ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ದಂಪತಿಯ ಪುತ್ರ ಜಗನ್ನಾಥ (7) ಮೆದುಳು ಜ್ವರದಿಂದ ಮೃತಪಟ್ಟಿದ್ದಾನೆ ಎಂದು ಗುಯಿಲಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರಂಜಿತಾ ಸ್ಪಷ್ಟಪಡಿಸಿದ್ದಾರೆ.
ಮಗುವಿಗೆ ಜ್ವರ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುರ ಚಿಕಿತ್ಸೆಗೆ ಸ್ಪಂದಿಸದ ಕಾರಣ ಗುರುವಾರ ಮೃತಪಟ್ಟಿದೆ.
ಡೆಂಗಿ ಜ್ವರದಿಂದ ಮಗು ಸಾವನ್ನಪ್ಪಿರುವುದಾಗಿ ವದಂತಿ ಹಬ್ಬಿಸಲಾಗಿತ್ತು. ಬಸವೇಶ್ವರ ಆಸ್ಪತ್ರೆಯಿಂದ ನೀಡಿರುವ ಪ್ರಯೋಗಾಲಯದ ವರದಿಯಲ್ಲಿ ಡೆಂಗಿ ನೆಗೆಟಿವ್ ಎಂದು ಬಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.