ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್, ಬಿಜೆಪಿ ಚುನಾವಣಾ ಪ್ರಚಾರದ ಗಿಮಿಕ್ನಂತೆ ಕಾಣುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

‘ಬಡವರು, ಮಹಿಳೆಯರು, ವಿದ್ಯಾರ್ಥಿಗಳ ಬಗ್ಗೆ ಬಜೆಟ್ನಲ್ಲಿ ಯಾವುದೇ ಕಾರ್ಯಕ್ರಮ ಇಲ್ಲ. ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಬಗ್ಗೆ ಪ್ರಸ್ತಾಪವಿಲ್ಲ. ಯುವಕರಿಗೆ ಉದ್ಯೋಗದ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ₹ 2,000 ಸಹಾಯಧನ ನೀಡುವುದಾಗಿ ಘೋಷಣೆ ಮಾಡಿ ನಿರುದ್ಯೋಗಿಗಳನ್ನು ಅಪಮಾನಿಸಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ ಪ್ರಕಟಣೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ಪಾಸ್ ನೀಡಿದ್ದು, ವಿದ್ಯಾರ್ಥಿಗಳಿಗೂ ಈ ಸೌಲಭ್ಯ ವಿಸ್ತರಿಸಬೇಕಿತ್ತು. ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಹೈಟೆಕ್ ಬಸ್ ನಿಲ್ದಾಣದ ಬಗ್ಗೆ ಪ್ರಸ್ತಾಪವಿಲ್ಲ. ದಾವಣಗೆರೆ, ಚಿತ್ರದುರ್ಗ, ತುಮಕೂರು ನೇರ ರೈಲು ಮಾರ್ಗಕ್ಕೆ ಅನುದಾನ ನೀಡದಿರುವುದು ಅತ್ಯಂತ ಶೋಚನೀಯ. ಈ ಬಜೆಟ್ ಜನರ ಕಿವಿಗೆ ಹೂವು ಇಟ್ಟಿದೆ’ ಎಂದು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.