ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನೇಕೆರೆಯಲ್ಲಿ ಜೋಡಿ ಎತ್ತಿನ ಗಾಡಿ ಸ್ಪರ್ಧೆ

Last Updated 1 ಏಪ್ರಿಲ್ 2022, 5:10 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಹೊನ್ನೇಕೆರೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಅಂಗವಾಗಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ನೇತೃತ್ವದಲ್ಲಿ ಗುರುವಾರ ದ್ವಿತೀಯ ವರ್ಷದ ಜೋಡಿ ಎತ್ತಿನ ಗಾಡಿ ರಾಜ್ಯಮಟ್ಟದ ಸ್ಪರ್ಧೆ ನಡೆಯಿತು.

ಮಾರುತಿ ಯುವಕ ಸಂಘದವರು ಸ್ಪರ್ಧೆಗೆ ಚಾಲನೆ ನೀಡಿದರು. ಚಿಕ್ಕಮಗಳೂರು, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ, ರಾಯಚೂರು, ರಾಮನಗರ, ಮಂಡ್ಯ ಹಾಗೂ ಚಿತ್ರದುರ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜೋಡಿ ಎತ್ತಿನ ಗಾಡಿಗಳು ಭಾಗವಹಿಸಿದ್ದವು.

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ, ಆರೋಗ್ಯಕರ ರಾಸುಗಳನ್ನು ಸಾಕಲು ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಜೋಡಿ ಎತ್ತಿನಗಾಡಿ ಸ್ಪರ್ಧೆ ಆಯೋಜಿಸಲಾಗಿದೆ. ಜೋಡಿ ಎತ್ತಿನ ಗಾಡಿ ಸ್ಪರ್ಧೆಯಲ್ಲಿ ಗೆದ್ದಂತಹ ವಿಜೇತರಿಗೆ ಪ್ರಥಮ ಬಹುಮಾನವಾಗಿ ₹ 1 ಲಕ್ಷ, ದ್ವಿತೀಯ ಬಹುಮಾನ ₹ 70 ಸಾವಿರ, ತೃತೀಯ ಬಹುಮಾನ ₹ 40 ಸಾವಿರ, 4ನೇ ಬಹುಮಾನ ₹ 20 ಸಾವಿರದೊಂದಿಗೆ ಚಾಂಪಿಯನ್ ಟ್ರೋಫಿ ನೀಡಲಾಗುವುದು ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT