ಸೋಮವಾರ, ಸೆಪ್ಟೆಂಬರ್ 28, 2020
29 °C

ಬಸ್ ಪಲ್ಟಿ; 12 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಚಿತ್ರದುರ್ಗ: ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಸಮೀಪ ಶನಿವಾರ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ.  ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಚಳ್ಳಕೆರೆಯಿಂದ ಚಿತ್ರದುರ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್‌ ದಂಡಿನ ಕುರುಬರಹಟ್ಟಿ ಸಮೀಪ ಬರುತ್ತಿದ್ದಂತೆ ಕುರಿಗಳು ಅಡ್ಡ ಬಂದಿವೆ. ಅವುಗಳನ್ನು ಉಳಿಸಲು ಚಾಲಕ ಮುಂದಾದ ಸಂದರ್ಭ ಇದ್ದಕ್ಕಿದ್ದಂತೆ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

ಪೊಲೀಸರು ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು