ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಳಕಾಲ್ಮುರು: ಕಣಕುಪ್ಪೆ ಗ್ರಾಮಕ್ಕೆ ಸಾರಿಗೆ ಬಸ್ ಆರಂಭ

Last Updated 25 ಸೆಪ್ಟೆಂಬರ್ 2021, 6:22 IST
ಅಕ್ಷರ ಗಾತ್ರ

ಮೊಳಕಾಲ್ಮುರು: ತಾಲ್ಲೂಕಿನ ಗಡಿಗ್ರಾಮವಾದ ಕಣಕುಪ್ಪೆಗೆ ಶುಕ್ರವಾರದಿಂದ ರಾಜ್ಯಸಾರಿಗೆ ಬಸ್ ಸಂಚಾರವನ್ನು ಮರು ಆರಂಭಿಸಲಾಗಿದೆ.

ಇಲ್ಲಿಯ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಬಸ್ ವ್ಯವಸ್ಥೆ ಇಲ್ಲದೇ ನಿತ್ಯ 8 ಕಿ.ಮೀ ದೂರ ನಡೆದುಕೊಂಡು

ಹೋಗುವ ಅನಿವಾರ್ಯತೆ ಎದುರಾಗಿತ್ತು. ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಈ ಕುರಿತು ಫೆ. 21ರಂದು ಗ್ರಾಮದಲ್ಲಿ ನಡೆದಿದ್ದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯದ ವೇಳೆ ಗ್ರಾಮಸ್ಥರು ಬಸ್ ಸೇವೆಗೆ ಮನವಿ ಮಾಡಿದ್ದರು. ತಕ್ಷಣದಿಂದ ಬಸ್ ಸೇವೆ ಆರಂಭಿಸಲಾಗಿತ್ತು. ಆದರೆ ಕೋವಿಡ್ ಲಾಕ್‌ಡೌನ್ ನಂತರ ಬಸ್ ಸ್ಥಗಿತವಾಗಿತ್ತು. ಈಗ ಶಾಲೆ-ಕಾಲೇಜು ಮರು ಆರಂಭವಾಗಿದ್ದು ವಿದ್ಯಾರ್ಥಿಗಳು ಬಸ್ ಬಾರದ ಪರಿಣಾಮ ನಡೆದುಕೊಂಡು ಶಾಲೆಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಸೆ. 23ರಂದು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ತಕ್ಷಣ ಅಧಿಕಾರಿಗಳು ಎಚ್ಚೆತ್ತುಕೊಂಡು ಬಸ್ ಸೇವೆಯನ್ನು ಮರು ಆರಂಭಿಸಲು ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT