ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

Last Updated 19 ಜುಲೈ 2021, 5:19 IST
ಅಕ್ಷರ ಗಾತ್ರ

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಐಮಂಗಲ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ರಾಜಸ್ಥಾನದ ಜೈರಾಮ್ ( 28) ಹಾಗೂ ಅವರ ಪತ್ನಿ ಸುಶೀಲ (26), ಪುತ್ರ ಆಕಾಶ್ (4 ) ಮೃತರು. ರಾಜಾರಾಮ್ (28) ಹಾಗೂ ಕರಣ್ (8) ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಐಮಂಗಲ ಪೆಟ್ರೋಲ್ ಬಂಕ್ ಸಮೀಪ ಸೋಮವಾರ ನಸುಕಿನಲ್ಲಿ ಲಾರಿಯೊಂದು ನಿಂತಿತ್ತು. ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT