ಶುಕ್ರವಾರ, ಅಕ್ಟೋಬರ್ 7, 2022
28 °C

ಕಾರು, ಬೊಲೆರೊ ಡಿಕ್ಕಿ: ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಜಾಜೂರು: ಸಮೀಪದ ಚಿಕ್ಕಂದವಾಡಿ ಗ್ರಾಮದ ರಸ್ತೆ ತಿರುವಿನಲ್ಲಿ ಶುಕ್ರವಾರ ಕಾರು ಮತ್ತು ಬೊಲೆರೊ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

ಕಾರು ಹೊಳಲ್ಕೆರೆ ಕಡೆಯಿಂದ ಚಿಕ್ಕಂದವಾಡಿ ಗ್ರಾಮಕ್ಕೆ ತೆರಳುತ್ತಿದ್ದಾಗ, ಮಾರುತಿ ನಗರ ಬಡಾವಣೆ ಕಡೆಯಿಂದ ವೇಗವಾಗಿ ಬಂದ ಬೊಲೆರೊ ವಾಹನ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. 

ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳನ್ನು ಹೊಳಲ್ಕೆರೆ ಆಸ್ಪತ್ರೆಗೆ ಕಳುಹಿಸಿದರು.

ಹಂಪ್ಸ್‌ ಹಾಕಲು ಆಗ್ರಹ:

ಈ ಸ್ಥಳದಲ್ಲಿ ವಾರದಲ್ಲಿ ಮೂರ್ನಾಲ್ಕು ಬಾರಿ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ವಾಹನ ಚಾಲಕರು ವೇಗವಾಗಿ ವಾಹನಗಳನ್ನು ಚಲಾಯಿಸಿಕೊಂಡು ಬರುತ್ತಿರುತ್ತಾರೆ. ಸಂಜೆ ವೇಳೆಯಲ್ಲಿ ಕೆಲವರು ಮದ್ಯಪಾನ ಮಾಡಿ ವಾಹನಗಳನ್ನು ಚಲಾಯಿಸುತ್ತಿರುತ್ತಾರೆ. ಹೀಗಾಗಿ ಮಕ್ಕಳನ್ನು ಮನೆಯ ಮುಂದೆ ಆಟಕ್ಕೆ ಬಿಡಲು ಭಯವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆಗೆ ಹಂಪ್ಸ್‌ ಹಾಕಬೇಕು ಎಂದು ನಿವಾಸಿಗಳಾದ ಈಶ್ವರಪ್ಪ, ಮಲ್ಲಯ್ಯ, ಬಿ.ಜಿ. ಜಯ್ಯಪ್ಪ, ಲಕ್ಷ್ಮಿದೇವಿ, ಮಂಜುಳ, ಯಶೋದಮ್ಮ, ಮೀನಾಕ್ಷಮ್ಮ, ಕವಿತಾ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.