ಮೊಳಕಾಲ್ಮುರು: ಕಾರಿನ ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಬೆಂಕಿ ಹೊತ್ತಿಕೊಂಡು ಕಾರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಗುರುವಾರ ಬೆಳಿಗ್ಗೆ ತಾಲ್ಲೂಕಿನ ತಮ್ಮೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 150 ‘ಎ’ನಲ್ಲಿ ನಡೆದಿದೆ.

ಕಾರ್ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಸ್ವಾಮಿಹಳ್ಳಿಯ ಭೀಮನಗೌಡ ಅವರಿಗೆ ಸೇರಿದ್ದು, ಬಳ್ಳಾರಿಯಿಂದ ಚಳ್ಳಕೆರೆಗೆ ಹೋಗುವಾಗ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕಾರ್ನಲ್ಲಿ ಇದ್ದವರು ಕೆಳಗಡೆ ಇಳಿದ ಪರಿಣಾಮ ಯಾರಿಗೂ ತೊಂದರೆಯಾಗಿಲ್ಲ.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದರು. ಅಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಈ ಕುರಿತು ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.