ಮಂಗಳವಾರ, ಜೂನ್ 15, 2021
27 °C

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿನ ಗೊಲ್ಲಹಳ್ಳಿ ಸಮೀಪ ಭಾನುವಾರ ರಾತ್ರಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆಯ ರಾಜಶೇಖರ್ (56) ಮತ್ತು ಜನಾರ್ದನ (46) ಮೃತಪಟ್ಟ
ವರು. ಗಂಭೀರವಾಗಿ ಗಾಯಗೊಂಡಿರುವ ರಾಘವೇಂದ್ರ ಎಂಬುವವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರುತಿಳಿಸಿದ್ದಾರೆ.

ಉಕ್ಕಿನ ವಸ್ತುಗಳನ್ನು ಹೊತ್ತಿದ್ದ ಲಾರಿಯ ಟೈರ್‌ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ಅಪಘಾತವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.