ಹೊಳಲ್ಕೆರೆ: ಜಾತಿ ಗಣತಿಯಲ್ಲಿ ಕಾಡುಗೊಲ್ಲ ಸಮುದಾಯದವರು ಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದು ನಮೂದಿಸಬೇಕು ಎಂದು ಕಾಡುಗೊಲ್ಲ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎ.ಚಿತ್ತಪ್ಪ ಮನವಿ ಮಾಡಿದ್ದಾರೆ.

‘ರಾಜ್ಯ ಸರ್ಕಾರ ಕಾಡುಗೊಲ್ಲರನ್ನು ಪತ್ಯೇಕ ಜಾತಿ ಎಂದು ಗುರುತಿಸಿದ್ದು, ಕಾಡುಗೊಲ್ಲ ಜಾತಿ ಪ್ರಮಾಣಪತ್ರ ನೀಡಲಾಗುತ್ತಿದೆ. ಸಮುದಾಯದ ಅಭಿವೃದ್ಧಿಗಾಗಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಜತೆಗೆ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸಮುದಾಯದ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ, ವಸತಿ, ನೇರ ಸಾಲ, ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಯೋಜನೆಗಳನ್ನು ಪಡೆಯಲು ಅನುಕೂಲವಾಗುತ್ತದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೌಡಿಹಳ್ಳಿ ಆನಂದಪ್ಪ, ಗೊಲ್ಲರಹಳ್ಳಿಯ ರಂಗಸ್ವಾಮಿ, ಅಗ್ರಹಾರ ಬಸವರಾಜು, ಅಜ್ಜಪ್ಪ, ತಿಮ್ಮಪ್ಪ, ಲೋಕೇಶ್, ಮೋಹನ್ ನಾಗರಾಜ್, ರಂಗಸ್ವಾಮಿ, ರವಿಕುಮಾರ್, ಸುರೇಶ್, ಶಶಿಕುಮಾರ್, ಸಚಿನ್, ವೀರನಾಗಪ್ಪ, ಲೋಕೇಶ್, ಅವಳೇಶ್ ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.