ಚಿತ್ರದುರ್ಗ: ನಗರದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಇಲ್ಲದ ಕಾರಣ ಕಳ್ಳಕಾಕರ ಭಯ ತೀವ್ರವಾಗಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಸದಸ್ಯರು ಮಂಗಳವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಹಲವು ಪ್ರದೇಶಗಳಲ್ಲಿ ಒಂಟಿ ಹೆಣ್ಣುಮಕ್ಕಳು ಓಡಾಡಲು ಭಯ ಪಡುವಂತಾಗಿದೆ. ವಿವಿಧೆಡೆ ಬೀದಿ ದೀಪಗಳೂ ಇಲ್ಲದ ಕಾರಣ ಸಂಜೆ ಆಗುತ್ತಿದ್ದಂತೆ ಭಯ ಆವರಿಸುತ್ತದೆ. ವಿವಿಧೆಡೆ ಕಳ್ಳರು ಸರಗಳವು ಮಾಡುತ್ತಿದ್ದಾರೆ. ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯ ಮಾಡುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈಗಲಾದರೂ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

‘ಹಲವು ಕಡೆ ನೆಪಕ್ಕಷ್ಟೇ ಕ್ಯಾಮೆರಾ ಅಳವಡಿಸಿದ್ದು, ಗುತ್ತಿಗೆದಾರರು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಾರೆ. ಆದರೆ, ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ. ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಶೀಘ್ರ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ಶಿವಕುಮಾರ್, ಮುಖಂಡರಾದ ಮುಜಾಯಿಲ್, ಗೋಪಿನಾಥ್, ವೀಣಾ ಗೌರಣ್ಣ, ಶಶಿಧರ, ನಾಗೇಶ್, ಅಖಿಲೇಶ್, ವಿಜಯಬಾಬು, ಹರೀಶ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.