ಮಂಗಳವಾರ, ಜನವರಿ 19, 2021
25 °C

ಡಿ.ವಿ.ಸದಾನಂದ ಗೌಡ ಚೇತರಿಕೆ: ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DV Sadananda Gowda

ಚಿತ್ರದುರ್ಗ: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಚಿತ್ರದುರ್ಗದಿಂದ ಬೆಂಗಳೂರು ವರೆಗೆ ಜೀರೋ ಟ್ರಾಫಿಕ್ ನಲ್ಲಿ ಸ್ಥಳಾಂತರ ಮಾಡಲಾಯಿತು. ಸದಾನಂದಗೌಡರು, ಬಸವೇಶ್ವರ ಆಸ್ಪತ್ರೆಯಲ್ಲಿ ಜ್ಯೂಸ್ ಕುಡಿದು ಸಹಜವಾದಂತೆ ಕಂಡುಬಂದರು.

ಇದನ್ನೂ ಓದಿ: 

ಏಕಾಏಕಿ ಅಸ್ವಸ್ಥರಾಗಿದ್ದ ಅವರು ಪ್ರಜ್ಞೆ ತಪ್ಪಿದ್ದರು. ತಕ್ಷಣ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಗೆ ಸ್ಪಂದಿಸಿ, ಚೆನ್ನಾಗಿಯೇ ಮಾತನಾಡಿದರು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳಿಸಲಾಗಿದೆ ಎಂದು ವೈದ್ಯ ಡಾ. ಅಭಿಷೇಕ್ ಮಾಹಿತಿ ನೀಡಿದರು.

ಆಂಬುಲೆನ್ಸ್‌ನಲ್ಲಿ ಸದಾನಂದ ಗೌಡರ ಜತೆಗೆ ಡಾ. ಜಗದೀಶ್ ಕೂಡ ಬೆಂಗಳೂರಿಗೆ ತೆರಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು