ಚಳ್ಳಕೆರೆ: ರೈತರಿಗೆ ಕೂಡಲೇ ವಿಮೆ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ನೇತೃತ್ವದಲ್ಲಿ ಮಂಗಳವಾರ ಹಿರೇಹಳ್ಳಿ ಸಮೀಪದ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

‘2025–26ನೇ ಸಾಲಿನ ಬೆಳೆವಿಮೆ ಮತ್ತು ಬೆಳೆ ಪರಿಹಾರ ಇದುವರೆಗೂ ರೈತರಿಗೆ ಸಿಕ್ಕಿಲ್ಲ. ಎಲ್ಲಾ ತಾಲ್ಲೂಕುಗಳಲ್ಲಿ ತಹಶೀಲ್ದಾರ್, ಕೃಷಿ ಇಲಾಖೆ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೂ ಯಾರೊಬ್ಬರೂ ಸ್ಪಂದಿಸಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಈ ಬಗ್ಗೆ ಕೇಳಿದರೆ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ’ ಎಂದು ಬಸವರೆಡ್ಡಿ ಆಕ್ರೋಶ ಹೊರಹಾಕಿದರು. ‘ಬೆಳೆ ವಿಮೆ ಕಂಪನಿಗಳ ವಿರುದ್ಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಕಂಪನಿಗಳೊಂದಿಗೆ ಅಧಿಕಾರಿಗಳು ಶಾಮೀಲಾಗಿರುವ ಅನುಮಾನ ಮೂಡುತ್ತಿದೆ. ಮುಂದಿನ ದಿನಗಳಲ್ಲಿ ಬೆಳೆ ವಿಮೆಗಾಗಿ ರೈತರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿಯನ್ನು ಅಧಿಕಾರಿಗಳು ನಿರ್ಮಾಣ ಮಾಡಿದ್ದಾರೆ’ ಎಂದು ಕಿಡಿಕಾರಿದರು.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದರು. ತಹಶೀಲ್ದಾರ್ ರೇಹಾನ್ ಪಾಷ, ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರೈತರಿಂದ ಮನವಿ ಸ್ವೀಕರಿಸಿ, ಅದಷ್ಟು ಬೇಗ ಬೆಳೆ ವಿಮೆ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.

ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ, ಕೆ.ಟಿ. ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ, ಮರ್ಲಹಳ್ಳಿ ರವಿಕುಮಾರ್, ಸೂರಮ್ಮನಹಳ್ಳಿ ರಾಜಣ್ಣ, ಮಲ್ಲಸಮುದ್ರ ಗಂಗಾಧರ್, ಚಿಕ್ಕಣ್ಣ, ವೆಂಕಟೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.