ಚಳ್ಳಕೆರೆ: ರೈತರ ಬೆಳೆ ವಿಮೆ ಹಣದ ಜಮೆ ವೇಳೆ ಮಾಡಿರುವ ತಾರತಮ್ಯ ಮತ್ತು ಕೃಷಿ ಇಲಾಖೆಯಿಂದ ನೀಡುತ್ತಿರುವ ಶೇಂಗಾ ಬೀಜದ ದರ ಕಡಿಮೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಗಳ ಒಕ್ಕೂಟದ ಸದಸ್ಯರು ಬುಧವಾರ ತಾಲ್ಲೂಕು ಕಚೇರಿ ಗೇಟಿಗೆ ಬೀಗ ಹಾಕಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಕೆ.ಪಿ.ಭೂತಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

‘ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ 2025–26ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಕಟ್ಟಿದ ರೈತರಿಗೆ ವಿಮಾ ಕಂಪನಿ ಮತ್ತು ಸರ್ಕಾರದಿಂದ ಮೋಸವಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 13 ಪಂಚಾಯಿತಿಗಳಲ್ಲಿ ವಿಮೆ ಶೂನ್ಯವಾಗಿದ್ದು, ಈ ಕುರಿತು ಮರು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಎಲ್ಲಾ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ಉಚಿತವಾಗಿ ನೀಡಬೇಕು. ಸರ್ಕಾರ ನೀಡುತ್ತಿರುವ ಮಾಸಾಶನ, ವಿಧವಾ ವೇತನ, ಗೃಹಲಕ್ಷ್ಮಿ, ಅಂಗವಿಕಲರ ವೇತನ, ಹಿರಿಯ ನಾಗರಿಕರ ವೇತನ 3 ತಿಂಗಳಿಂದ ಸಂದಾಯವಾಗದೆ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ರೈತರಿಗೆ ಕೃಷಿ ಇಲಾಖೆಯಲ್ಲಿ ವಿತರಿಸುವ ಶೇಂಗಾ ಬೀಜದ ಬೆಲೆ ಕ್ವಿಂಟಲ್ಗೆ ₹12,000 ಆಗಿದ್ದು, ದರ ಕಡಿಮೆ ಮಾಡಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮನವಿ ಮಾಡಿದರು.

ಪ್ರತಿಭಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಭೇಟಿ ನೀಡಿ ರೈತರ ಮನವಿ ಸ್ವೀಕರಿಸಿದರು. ವಿಮೆ ಹಣ ಬಿಡುಗಡೆ ವೇಳೆ ಆಗಿರುವ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದು ಬಗೆಹರಿಸಲಾಗುವುದು. ಮೂರ್ನಾಲ್ಕು ದಿನಗಳಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ರೈತರು, ವಿಮಾ ಕಂಪನಿಯವರ ಸಭೆ ನಡೆಸುವುದಾಗಿ ಅವರು ಭರವಸೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-44-53555818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.