ಚಳ್ಳಕೆರೆ: ‘ರೈತರಿಗೆ ಗೊಬ್ಬರ ಹಾಗೂ ಕೀಟನಾಶಕ ವಿತರಿಸಿದ ನಂತರ ಮಾರಾಟಗಾರರು ಕಡ್ಡಾಯವಾಗಿ ರಸೀದಿ ಕೊಡಬೇಕು. ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕೃಷಿ ಸಹಾಯಕ ನಿರ್ದೇಶಕ ಎಸ್.ಟಿ.ರಮೇಶ್, ಗೊಬ್ಬರ ಮಾರಾಟಗಾರರಿಗೆ ಎಚ್ಚರಿಸಿದರು.

ನಗರದಲ್ಲಿರುವ ಗೊಬ್ಬರದ ಅಂಗಡಿಗಳಿಗೆ ಹಾಗೂ ದಾಸ್ತಾನು ಮಳಿಗೆಗಳಿಗೆ ಭೇಟಿ ನೀಡಿ, ಗೊಬ್ಬರ ನೀಡಿರುವ ಕುರಿತ ರಸೀದಿ ಹಾಗೂ ಗೊಬ್ಬರ ದಾಸ್ತಾನು ಪರಿಶೀಲಿಸಿ ಮಾತನಾಡಿದರು.

‘ಮುಂಗಾರು ಹಂಗಾಮಿಗೆ ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಲು ಹಾಗೂ ಕೃತಕ ಅಭಾವ ತಡೆಯಲು ರೈತರಿಗೆ ಸರಿಯಾದ ಬೆಲೆಗೆ ಗೊಬ್ಬರ ಮಾರಾಟ ಮಾಡಬೇಕು. ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಅಥವಾ ಅಧಿಕೃತ ಬಿಲ್ ನೀಡದಿದ್ದರೆ ಪರವಾನಗಿ ರದ್ದು ಮಾಡಲಾಗುವುದು’ ಎಂದರು.

‘ಬೀಜ ಮತ್ತು ಗೊಬ್ಬರದ ಕೃತಕ ಅಭಾವ ಸೃಷ್ಟಿ ಆಗದಂತೆ ನೋಡಿಕೊಳ್ಳಬೇಕು. ರೈತರಿಗೆ ಅನ್ಯಾಯ ಆಗದಂತೆ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕು. ಅಂಗಡಿಗಳಿಗೆ ಬರುವ ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರೈತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೀಜ ಮತ್ತು ಗೊಬ್ಬರದ ದಾಸ್ತಾನು ಸಾಕಷ್ಟಿದೆ. ಯಾವುದೇ ರೀತಿಯ ಕೊರತೆ ಇಲ್ಲ. ದರಪಟ್ಟಿಯನ್ನು ಅಂಗಡಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ದಾಸ್ತಾನು ನೋಂದಣಿ ಸಹ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-44-579309678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.