ಹಿರಿಯೂರು: ಶಾಸಕ ಟಿ.ರಘುಮೂರ್ತಿ ಕಾರು ಅಪಘಾತ

ಹಿರಿಯೂರು: ತಾಲ್ಲೂಕಿನ ಬಬ್ಬೂರು ಗ್ರಾಮದ ಬಳಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕಾರು ಅಪಘಾತವಾಗಿದೆ. ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಶಾಸಕರು ಮಂಗಳವಾರ ರಾತ್ರಿ ಚಳ್ಳಕೆರೆ ಕಡೆಯಿಂದ ಮಸ್ಕಲ್ ಗೊಲ್ಲರಹಟ್ಟಿಯ ಸಂಬಂಧಿಕರ ಮನೆಗೆ ತೆರಳುತ್ತಿದ್ದರು. ಮಸ್ಕಲ್ ಗ್ರಾಮದಿಂದ ಮದುವೆಗೆ ಹೊರಟಿದ್ದ ಮಹೀಂದ್ರಾ ಜೈಲೋ ಕಾರು ಹಾಗೂ ಶಾಸಕರ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಏರ್ ಬ್ಯಾಗ್ ತೆರೆದುಕೊಂಡಿದ್ದು ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ಎರಡೂ ಕಾರಿನ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.