ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ ನಗರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಸುಮಕ್ಕ ಆಂಜಿನಪ್ಪ

Last Updated 17 ಡಿಸೆಂಬರ್ 2021, 4:55 IST
ಅಕ್ಷರ ಗಾತ್ರ

ಚಳ್ಳಕೆರೆ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ 17ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಸುಮಕ್ಕ ಆಂಜಿನಪ್ಪ ಆಯ್ಕೆಯಾದರು.

ಸಿ.ಬಿ. ಜಯಲಕ್ಷ್ಮೀ ಅವರು ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಾಧ್ಯಕ್ಷರಾಗಿದ್ದ ಜೈತುನ್ಬಿ ಪ್ರಭಾರ ಅಧ್ಯಕ್ಷೆಯಾಗಿದ್ದರು.

ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಮೀಸಲಿತ್ತು. ಕಾಂಗ್ರೆಸ್ ಸದಸ್ಯೆ ಸುಮಕ್ಕ ಆಂಜಿನಪ್ಪ ಮತ್ತು ಜೆಡಿಎಸ್-ಬಿಜೆಪಿ ಬೆಂಬಲಿತ ಜೆಡಿಎಸ್ ಸದಸ್ಯೆ 20ನೇ ವಾರ್ಡ್‌ನ ನಿರ್ಮಲಾ ಅವರು ಅಧ್ಯಕ್ಷ ಸ್ಥಾನಕ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿ 4, ಜೆಡಿಎಸ್ 10 ಸೇರಿ ಒಟ್ಟು 14 ಜನ ಸದಸ್ಯರು ನಿರ್ಮಲ ಅವರಿಗೆ ಬೆಂಬಲ ಸೂಚಿಸಿದರು. ಕಾಂಗ್ರೆಸ್‍ನ 18 ಜನ ಸದಸ್ಯರು ಸುಮಕ್ಕ ಆಂಜಿನಪ್ಪ ಅವರ ಪರ ಕೈ ಎತ್ತಿ ಬೆಂಬಲ ಸೂಚಿಸಿದರು. ಬಹುಮತದ ಕಾರಣ ಸುಮಕ್ಕ ಆಂಜಿನಪ್ಪ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಚಂದ್ರಪ್ಪ ತಿಳಿಸಿದ್ದಾರೆ.

ಅಭಿವೃದ್ಧಿ ಕೆಲಸಕ್ಕೆ ಆದ್ಯತೆ ನೀಡಲು ಶಾಸಕರ ಸಲಹೆ: ಕೋವಿಡ್ ಕಾರಣ ನಗರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆಯಾಗಿದೆ. ನಗರದ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ನಗರಸಭೆ ಸದಸ್ಯರಿಗೆ ಸಲಹೆ ನೀಡಿದರು.

ಶುದ್ಧ ಕುಡಿಯುವ ನೀರು ಪೂರೈಕೆ, ರಸ್ತೆ, ಚರಂಡಿ ಸ್ವಚ್ಛತೆ ಹಾಗೂ ಪ್ರತಿದಿನ ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಚಳ್ಳಕೆರೆಯನ್ನು ಮಾದರಿ ನಗರವನ್ನಾಗಿ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT