ಚಳ್ಳಕೆರೆ: ‘ಒಳಮೀಸಲಾತಿ ವಿಚಾರದಲ್ಲಿ ಜನಪ್ರತಿನಿಧಿಗಳಿಗೆ ಏನೇ ಭಿನ್ನಾಭಿಪ್ರಾಯಗಳು ಇದ್ದರು ಅವುಗಳನ್ನು ಬದಿಗಿಟ್ಟು, ಪಕ್ಷ ಬೇಧ ಮರೆತು ಒಗ್ಗಟ್ಟಾಗಿ ಹೋರಾಡಿ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ಮಾದಿಗ ನೌಕರರ ಸಂಘದ ವತಿಯಿಂದ ತಾಲ್ಲೂಕಿನ ಪರಶುರಾಂಪುರದ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಬಿ.ಆರ್.ಅಂಬೇಡ್ಕರ್ ಅವರ 135ನೇ ಮತ್ತು ಬಾಬು ಜಗಜೀವನರಾಂ ಅವರ 119ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

‘ಒಳಮೀಸಲಾತಿ ಈಗ ಗೊಂದಲದ ಗೂಡಾಗಿದೆ. ರಾಜಕೀಯ ಮರೆತು ನಮ್ಮ ಜನಾಂಗದ ಏಳಿಗೆಗಾಗಿ ಹೋರಾಟ ಮಾಡಬೇಕು. ಈಗ ಒಳಮೀಸಲಾತಿ ಪಡೆಯುವಲ್ಲಿ ಆಗಿರುವ ತಪ್ಪುಗಳನ್ನು ಎಲ್ಲರೂ ಸೇರಿಕೊಂಡು ಅವಲೋಕನ ಮಾಡಿ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಬೇಕಿದೆ’ ಎಂದು ತಿಳಿಸಿದರು.

‘ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜಯಂತಿಗಳು ಆಚರಣೆಗೆ ಸೀಮಿತವಾಗಬಾರದು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂಬೇಡ್ಕರ್ ಯಾವ ನಾಯಕರನ್ನೂ ನೆಚ್ಚಿಕೊಂಡು ಹೋಗಲಿಲ್ಲ. ಅವರೇ ನಾಯಕರಾಗಿ ಬೆಳೆದರು. ಅವರಂತೆಯೇ ನಾವು ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಬೇಕು’ ಎಂದು ಕೋಡಿಹಳ್ಳಿ ಮಠದ ಷಡಾಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

‘ಮೊದಲು ಶಿಕ್ಷಣ ಪಡೆಯಬೇಕು. ಬಳಿಕ ನಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಮಾಡಬೇಕು. ಬಸವಣ್ಣನವರು 12ನೇ ಶತಮಾನದಲ್ಲಿ ಮಹತ್ವದ ಕ್ರಾಂತಿ ಮಾಡಿದರು. ಅಂತಹ ವ್ಯಕ್ತಿಗಳ ತತ್ವ, ಆದರ್ಶಗಳು ಇಂದಿನ ಸಮಾಜದಲ್ಲಿ ಅತ್ಯವಶ್ಯಕವಾಗಿವೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ ತಿಳಿಸಿದರು.

ಸಂಸದ ಗೋವಿಂದ ಕಾರಜೋಳ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ತಿಪ್ಪೇಸ್ವಾಮಿ, ಚೌಳೂರು ಪ್ರಕಾಶ್ ಮಾತನಾಡಿದರು.

ಬಳಿಕ ಮಾದಿಗ ಸಮುದಾಯದ ಅಭಿವೃದ್ಧಿಗೆ ಪರಶುರಾಂಪುರದಲ್ಲಿ 1 ಎಕರೆ ಭೂಮಿ ನೀಡುವಂತೆ ಸಮುದಾಯದ ಮುಖಂಡರು ಮನವಿ ಪತ್ರ ನೀಡಿದರು.

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಮಲ್ಲಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಟಿ.ಡಿ.ರಾಜಗಿರಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಪ್ರಾಧ್ಯಾಪಕರಾದ ಲಿಂಗಣ್ಣ ಜಂಗಮರಹಳ್ಳಿ, ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಓ.ಶಂಕರ್ ಸೇರಿದಂತೆ ಎಲ್ಲಾ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-44-513945843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.