ಚಳ್ಳಕೆರೆ: ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭಗೊಂಡಿದ್ದು, ಮೊದಲ ದಿನ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂಗುಚ್ಛ, ಸಿಹಿ ನೀಡಿ ಬರಮಾಡಿಕೊಂಡರು.

ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮಸ್ಥರು, ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ವಿದ್ಯಾರ್ಥಿಗಳನ್ನು ಕರೆತಂದರು. ಡೊಳ್ಳು, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ನಡೆದ ಮೆರವಣಿಗೆ ವೇಳೆ ಪೋಷಕರು ಸಂಭ್ರಮಿಸಿದರು.

ಶಾಲೆಯನ್ನು ಮದುವಣಗಿತ್ತಿಯಂತೆ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಕೊಠಡಿಗಳನ್ನು ವಿವಿಧ ಬಣ್ಣದ ಬಲೂನ್, ಆವರಣವನ್ನು ಸುಂದರ ರಂಗೋಲಿಗಳಿಂದ ಅಲಂಕರಿಸಲಾಗಿತ್ತು.

ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಆರತಿ ಬೆಳಗಿ, ಹೂವು ಹಾಗೂ ಸಿಹಿ ತಿಂಡಿಗಳನ್ನು ನೀಡಿ ಸ್ವಾಗತಿಸಿದರು.

ಈ ವೇಳೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಅವರು ವಿದ್ಯಾರ್ಥಿಗಳಿಗೆ ಸಿಹಿ ಊಟ ಬಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-44-1420638945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.