ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೊ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Published 28 ಮಾರ್ಚ್ 2024, 14:27 IST
Last Updated 28 ಮಾರ್ಚ್ 2024, 14:27 IST
ಅಕ್ಷರ ಗಾತ್ರ

ಚಳ್ಳಕೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಸಂಬಂಧ ನಗರದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.  

‘ಓ.ನಾಗಭೂಷಣ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ಫೆ. 6ರಂದು ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಬಾಲಕಿಗೆ ಪ್ರಾಣ ಬೆದರಿಕೆಯನ್ನೂ ಹಾಕಿದ್ದ. ಆಟೊ ಚಾಲಕ ಎಸ್. ಅಭಿಷೇಕ್ ಕೃತ್ಯಕ್ಕೆ ಸಹಕಾರ ನೀಡಿದ್ದ’ ಎಂದು ಬಾಲಕಿ ತಂದೆಯು ಗುರುವಾರ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ನಿರೀಕ್ಷಕ ಕೆ.ಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT