ಚಳ್ಳಕೆರೆ: ‘ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ಸುರಕ್ಷಿತ, ಫ್ಲೋರೈಡ್ ಮುಕ್ತ ನೀರು ಒದಗಿಸುವ ಉದ್ದೇಶದಿಂದ ಹಳ್ಳಿಗಳಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪನೆ ಮಾಡಿದ್ದರೂ ಅವುಗಳಿಂದ ಯಾವುದೇ ಪ್ರಯೋಜವಾಗುತ್ತಿಲ್ಲ’ ಎಂದು ನಲ್ಲೂರಹಳ್ಳಿಯ ಯುವಕ ಟಿ. ಶ್ರೀನಿವಾಸ್ ಅಸಮಾಧಾನ ಹೊರಹಾಕಿದರು.

‘ದೇವರಮರಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆಂದು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಘಟಕ ನಿರ್ಮಾಣ ಮಾಡಿದ್ದಾರೆ. ಅದರಿಂದ ಜನರಿಗೆ ಯಾವುದೇ ಉಪಯೋಗವಾಗುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೆ, ತಾಂತ್ರಿಕ ದೋಷಗಳಿಂದ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅದಕ್ಕೆ ಅವರು ‘ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಬೇರೆ ಇಲಾಖೆಯ ವ್ಯಾಪ್ತಿಯಲ್ಲಿದೆ’ ಎಂದು ಸಬೂಬು ಹೇಳುತ್ತಿದ್ದಾರೆ. ಈವರೆಗೆ ಒಂದು ಬಾರಿಯೂ ಘಟಕದ ನೀರು ಕುಡಿದಿಲ್ಲ’ ಎಂದು ಆಕ್ರೋಶ ಹೊರಹಾಕಿದರು.

‘ಪ್ರತಿ ಕೆಡಿಪಿ ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ ಅವರು ನೀರಿನ ಶುದ್ಧೀಕರಣ ಘಟಕಗಳ ದುಃಸ್ಥಿತಿಯನ್ನು ಉಲ್ಲೇಖಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ. ಇಷ್ಟಾದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಗ್ರಾಮಸ್ಥರು ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.